ಬಾಲಕ ದೇಗುಲ ಪ್ರವೇಶಿಸಿದ್ದಕ್ಕೆ ದಂಡದ ಜೊತೆಗೆ ಶುದ್ಧೀಕರಣ- ಐವರ ವಿರುದ್ಧ ಕೇಸ್

Public TV
1 Min Read
KPL TEMPLE

ಕೊಪ್ಪಳ: ದಲಿತ ಬಾಲಕನೊಬ್ಬ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಂಡ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಐವರ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದ ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದಲ್ಲಿ ಸೆ.4ರಂದು ನಾಲ್ಕು ವರ್ಷದ ಪುಟ್ಟ ಬಾಲಕನ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆ ಪೋಷಕರೊಂದಿಗೆ ಈತ ದೇವಸ್ಥಾನ ಪ್ರವೇಶ ಮಾಡಿದ್ದನು. ಇದನ್ನು ವಿರೋಧಿಸಿದ ಮಿಯಾಪುರ ಗ್ರಾಮದ ಸವರ್ಣಿಯರು ದಲಿತ ಬಾಲಕನ ಕುಟುಂಬಕ್ಕೆ 11 ಸಾವಿರ ರೂಪಾಯಿ ದಂಡವನ್ನು ವಿಧಿಸಿ ಮಾನವೀಯತೆಯನ್ನು ಮರೆತಿತ್ತು.

KPL MAUDYACHARANE AV 9

ಇದರ ವಿರುದ್ಧ ಅನ್ಯಾಯಕ್ಕೆ ಒಳಗಾದ ಸಮುದಾಯ ಪ್ರತಿಭಟನೆಯನ್ನು ಮಾಡಿತ್ತು. ಇದರ ಭಾಗವಾಗಿ ಇತ್ತಿಚೆಗೆ ಅಧಿಕಾರಿಗಳು, ಪೊಲೀಸರು ಗ್ರಾಮದಲ್ಲಿ ಶಾಂತಿ ಸಭೆ ಮಾಡಿದ್ರು. ಇಷ್ಟೆಲ್ಲ ವಿಷಯ ಗಂಭೀರವಾಗಿದ್ರೂ ಬಾಲಕನ ತಂದೆ ದೂರು ಕೊಡಲು ನಿರಾಕರಣೆ ಮಾಡಿದ್ದರು. ಈ ಹಿನ್ನಲೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ಎಂಬವರು ದೂರು ದಾಖಲು ಮಾಡಿದ್ದರು. ಇದನ್ನೂ ಓದಿ: ಮಗು ಪ್ರವೇಶಿಸಿ ಅಪವಿತ್ರವಾಯ್ತೆಂದು ಪೋಷಕರಿಗೆ ದೇಗುಲ ಶುದ್ಧೀಕರಣದ ಜೊತೆಗೆ 10 ಸಾವಿರ ದಂಡ!

KPL MAUDYACHARANE AV 8

ಕನಕಪ್ಪ ಪೂಜಾರಿ, ಹನಮಗೌಡ, ಗವಿ ಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ ಶರಣಗೌಡ, ಎಂಬ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *