ಅಮೆರಿಕದಲ್ಲಿ ಕೋವಿಡ್ 19, ಭಯೋತ್ಪಾದನೆ, ಹವಾಮಾನ ವೈಪರೀತ್ಯ ಬಗ್ಗೆ ಮಾತನಾಡುತ್ತೇನೆ – ಮೋದಿ

Public TV
2 Min Read
FotoJet 48

ನವದೆಹಲಿ: ಭಾರತ, ಅಮೆರಿಕಾ ಜಾಗತಿಕ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಪರಾಮರ್ಶೆ ಮತ್ತು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಅಮೆರಿಕಾಗೆ ತೆರಳುವ ಮುನ್ನ ಪ್ರವಾಸದ ಉದ್ದೇಶ ಕುರಿತು ಮಾತನಾಡಿದ್ದಾರೆ.

ಮೋದಿ ಹೇಳಿದ್ದೇನು?
ಅಮೆರಿಕದ ಅಧ್ಯಕ್ಷ ಗೌರವಾನ್ವಿತ ಜೋ ಬೈಡೆನ್ ಅವರ ಆಹ್ವಾನದ ಮೇರೆಗೆ 2021ರ ಸೆಪ್ಟಂಬರ್ 22ರಿಂದ 25ರವರೆಗೆ ಅಮೆರಿಕಾಕ್ಕೆ ಭೇಟಿ ನೀಡುತ್ತಿದ್ದೇನೆ. ನನ್ನ ಈ ಭೇಟಿಯ ವೇಳೆ ಅಧ್ಯಕ್ಷ ಬೈಡೆನ್ ಅವರೊಂದಿಗೆ ಭಾರತ-ಅಮೆರಿಕ ಜಾಗತಿಕ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಪರಾಮರ್ಶೆ ಮತ್ತು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಸಲಾಗುವುದು ಎಂದರು. ಇದನ್ನೂ ಓದಿ:  ಅಂಗನವಾಡಿ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಿಕ್ಸ್

Joe biden

ಎರಡೂ ರಾಷ್ಟ್ರಗಳ ನಡುವೆ ವಿಶೇಷವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರದ ಅವಕಾಶಗಳನ್ನು ಅನ್ವೇಷಿಸುವ ಕುರಿತು ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರೊಂದಿಗೂ ಭೇಟಿಯನ್ನು ಎದುರು ನೋಡುತ್ತಿದ್ದೇನೆ. ನಾನು ಅಧ್ಯಕ್ಷ ಬೈಡನ್, ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಮಂತ್ರಿ ಯೋಶಿಹೈದ್ ಸುಗಾ ಅವರೊಂದಿಗೆ ಮೊದಲ ಭೌತಿಕ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಹಿಸಲಿದ್ದೇನೆ ಎಂದು ತಿಳಿಸಿದರು.

Joe Biden modi

ಶೃಂಗಸಭೆಯು ಈ ವರ್ಷ ಮಾರ್ಚ್ ನಲ್ಲಿ ನಡೆದ ವರ್ಚುವಲ್ ಶೃಂಗಸಭೆಯ ಫಲಿತಾಂಶಗಳ ಪ್ರಗತಿಯನ್ನು ಪರಾಮರ್ಶಿಸಲು ಅವಕಾಶ ಒದಗಿದೆ. ಅದು ಅಲ್ಲದೇ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ನಮ್ಮ ಸಮಾನ ಹಂಚಿಕೆಯ ದೃಷ್ಟಿಕೋನದ ಆಧಾರದ ಮೇಲೆ ಭವಿಷ್ಯದ ಸಹಭಾಗಿತ್ವದ ಆದ್ಯತೆಗಳನ್ನು ಗುರುತಿಸಲು ನೆರವಾಗಲಿದೆ ಎಂದರು. ಇದನ್ನೂ ಓದಿ: ಆ್ಯಪ್ ಬಂದ್ ಮಾಡಿ ಝೊಮ್ಯಾಟೋ ಸಿಬ್ಬಂದಿ ಪ್ರತಿಭಟನೆ

pmmodi medium

ನಾನು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾರಿಸನ್ ಮತ್ತು ಜಪಾನ್ ನ ಪ್ರಧಾನಮಂತ್ರಿ ಸುಗಾ ಅವರನ್ನು ಭೇಟಿ ಮಾಡಿ ತಮ್ಮ ದೇಶಗಳೊಂದಿಗಿನ ಬಲವಾದ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿ ಪರಾಮರ್ಶೆ ನಡೆಸಲಾಗುವುದು ಮತ್ತು ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಉಪಯುಕ್ತ ವಿನಿಮಯವನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.

ಕೋವಿಡ್-19 ಸಾಂಕ್ರಾಮಿಕ, ಭಯೋತ್ಪಾದನೆಯನ್ನು ಎದುರಿಸುವ ಅಗತ್ಯತೆ, ಹವಾಮಾನ ವೈಪರೀತ್ಯ ಮತ್ತು ಇತರೆ ಪ್ರಮುಖ ಸಮಸ್ಯೆಗಳನ್ನು ಒಳಗೊಂಡಂತೆ ಜಾಗತಿಕ ಸವಾಲುಗಳನ್ನು ಕೇಂದ್ರೀಕರಿಸುವ ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ನಾನು ನನ್ನ ಪ್ರವಾಸವನ್ನು ಮುಕ್ತಾಯಗೊಳಿಸಲಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ:  ಫೋಟೋ ಪಾಲಿಟಿಕ್ಸ್-ಮೋದಿ ಭಾವಚಿತ್ರ ಅಳವಡಿಕೆಗೆ ಜೆಡಿಎಸ್ ವಿರೋಧ

ನನ್ನ ಈ ಅಮೆರಿಕ ಭೇಟಿ, ಅಮೆರಿಕಾದೊಂದಿಗಿನ ಸಮಗ್ರ ಜಾಗತಿಕ ಕಾರ್ಯತಂತ್ರ ಪಾಲುದಾರಿಕೆಯ ಬಲವರ್ಧನೆಗೆ ಮತ್ತು ನಮ್ಮ ಕಾರ್ಯತಂತ್ರ ಪಾಲುದಾರರಾದ ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಸಂಬಂಧ ಬಲಪಡಿಸಲು, ಪ್ರಮುಖ ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಸಹಯೋಗವನ್ನು ಮುಂದುವರಿಸಲು ಒಂದು ಸುಸಂದರ್ಭವಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *