Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ ಏರಿಕೆ ಆಯ್ತು ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳು

Public TV
Last updated: September 24, 2021 9:04 am
Public TV
Share
3 Min Read
dengue outbreak
SHARE

-ಈ ವರ್ಷ ಯಾವುದೇ ಮರಣ ಸಂಭವಿಸಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ನಿಯಂತ್ರಣಕ್ಕೆ ಬಂದಿದ್ದ ಡೆಂಗ್ಯೂ ಪ್ರಕರಣಗಳು ಈ ವರ್ಷ ಏರುಗತಿ ಪಡೆದಿದ್ದು, ಎರಡು ತಿಂಗಳಲ್ಲಿ 1,777 ಪ್ರಕರಣಗಳು ದೃಢಪಟ್ಟಿವೆ. ಇದನ್ನೂ ಓದಿ:  ಅಪ್ರಾಪ್ತೆ ಮೇಲೆ 8 ತಿಂಗಳಿಂದ ಸಾಮೂಹಿಕ ಅತ್ಯಾಚಾರ – 26 ಆರೋಪಿಗಳ ಬಂಧನ

 Mosquito

‘ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಹೊಸ ಮಾದರಿಯ ಸೆರೋಟೈಪ್-2 ವೈರಾಣುವಿಂದ ಅಪಾಯಕಾರಿ ಡೆಂಗ್ಯೂ ಜ್ವರ ಕಾಣಸಿಕೊಳ್ಳುತ್ತಿದೆ’ ಎಂದು ಕಳೆದ ವಾರವಷ್ಟೇ ಕಳವಳ ವ್ಯಕ್ತಪಡಿಸಿದ್ದ ಕೇಂದ್ರ ಸರ್ಕಾರ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿತ್ತು. ಈ ವರ್ಷ ಮೊದಲ ಏಳು ತಿಂಗಳ ಅವಧಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1,500ರ ಗಡಿಯ ಆಸುಪಾಸಿನಲ್ಲಿತ್ತು. ಮಳೆ ಚುರುಕುಗೊಂಡ ಬಳಿಕ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯ ಹಾದಿ ಹಿಡಿದಿದೆ. ಈವರೆಗೆ ಒಟ್ಟು 3,279 ಪ್ರಕರಣಗಳು ವರದಿಯಾಗಿವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

precautionary steps cure dengue

ಬೆಂಗಳೂರಿನಲ್ಲಿ 575 ಪ್ರಕರಣಗಳು ದೃಢಪಟ್ಟಿವೆ. ಕಲಬುರ್ಗಿಯಲ್ಲಿ 313, ಉಡುಪಿಯಲ್ಲಿ 312, ಶಿವಮೊಗ್ಗದಲ್ಲಿ 235, ದಕ್ಷಿಣ ಕನ್ನಡದಲ್ಲಿ 190, ಕೊಪ್ಪಳದಲ್ಲಿ 160, ಬಳ್ಳಾರಿಯಲ್ಲಿ 145, ದಾವಣಗೆರೆಯಲ್ಲಿ 138, ಹಾವೇರಿಯಲ್ಲಿ 125, ಗದಗದಲ್ಲಿ 116 ಹಾಗೂ ವಿಜಯಪುರದಲ್ಲಿ 114 ಮಂದಿ ಡೆಂಗ್ಯೂ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗೆ ಇವೆ. ಇದನ್ನೂ ಓದಿ:  ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರ ಕ್ಯಾಮೆರಾಕ್ಕೆ ಪೋಸ್ ​​ ಕೊಟ್ಟ ಹುಲಿರಾಯ

ಸೋಂಕಿತ ಈಡಿಸ್ ಈಜಿಫ್ಟೈ ಸೊಳ್ಳೆಗಳ ಕಡಿತದಿಂದ ಹರಡುವ ಈ ಜ್ವರಕ್ಕೆ 2019ರಲ್ಲಿ 18 ಸಾವಿರಕ್ಕೂ ಅಧಿಕ ಮಂದಿ ಬಳಲಿದ್ದರು. ಅವರಲ್ಲಿ 17 ಮಂದಿ ಮೃತಪಟ್ಟಿದ್ದರು. 10 ಸಾವಿರಕ್ಕೂ ಅಧಿಕ ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿದ್ದವು. ದಶಕದಲ್ಲೇ ಅತೀ ಹೆಚ್ಚು ಮಂದಿ ಈ ಜ್ವರಕ್ಕೆ ಒಳಪಟ್ಟಿದ್ದರು. ಕಳೆದ ವರ್ಷ 3,823 ಮಂದಿಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಅವರಲ್ಲಿ 5 ಮಂದಿ ಮೃತಪಟ್ಟಿದ್ದರು.

dengue 1

ಆರೋಗ್ಯ ಇಲಾಖೆಯ ದೈನಂದಿನ ಡೆಂಗ್ಯೂ ವರದಿಯಲ್ಲಿ ಈ ವರ್ಷ ಯಾವುದೇ ಮರಣ ಸಂಭವಿಸಿಲ್ಲ ಎಂದು ತಿಳಿಸಲಾಗಿದೆ. ರಾಜ್ಯದಲ್ಲಿ ಈವರೆಗೆ 1,042 ಚಿಕೂನ್ ಗುನ್ಯಾ ಪ್ರಕರಣಗಳು ದೃಢಪಟ್ಟಿವೆ. ಉತ್ತರ ಕನ್ನಡ, ರಾಯಚೂರು ಹಾಗೂ ದಕ್ಷಿಣ ಕನ್ನಡ ಬಿಟ್ಟು ಉಳಿದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರಕರಣಗಳು ಖಚಿತಪಟ್ಟಿವೆ. ಎರಡು ತಿಂಗಳಲ್ಲಿ 534 ಮಂದಿ ಈ ಜ್ವರಕ್ಕೆ ಒಳಗಾಗಿದ್ದಾರೆ. ಕಲಬುರ್ಗಿ (143), ಕೋಲಾರ (108) ಹಾಗೂ ಶಿವಮೊಗ್ಗದಲ್ಲಿ (106) ಅಧಿಕ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗಡೆ ಇವೆ.

ಮುಂಜಾಗ್ರತಾ ಕ್ರಮಕ್ಕೆ ಸೂಚನೆ:
‘ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆ, ಸಂಗ್ರಹಿಸಿಟ್ಟ ನೀರಿನಲ್ಲಿ ಮೊಟ್ಟೆಯಿಟ್ಟು, ಸಂತಾನೋತ್ಪತ್ತಿ ಮಾಡುತ್ತದೆ. ಹಾಗಾಗಿ, ಮನೆಯ ಸುತ್ತಮುತ್ತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಇದನ್ನೂ ಓದಿ:  ನಾನು ಸಾಮಾನ್ಯ ಮುನುಷ್ಯ, ನನಗೆ ಸೆಕ್ಯೂರಿಟಿ ಬೇಡವೆಂದ: ಪಂಜಾಬ್ ಸಿಎಂ

Mosquito

‘ನೀರಿನ ತೊಟ್ಟಿಗಳು, ಟ್ಯಾಂಕ್‍ಗಳು ಮತ್ತು ಬ್ಯಾರಲ್‍ಗಳನ್ನು ಕನಿಷ್ಠ ಒಂದು ವಾರಗಳಿಗೊಮ್ಮೆ ಸ್ವಚ್ಛಗೊಳಿಸಿ, ಮುಚ್ಚಿಡಬೇಕು. ಮಳೆ ನೀರು ಸಂಗ್ರಹವಾಗುವ ವಾಹನಗಳ ಚಕ್ರಗಳು, ತೆಂಗಿನ ಚಿಪ್ಪುಗಳನ್ನು ವಿಲೇವಾರಿ ಮಾಡಬೇಕು. ಹವಾನಿಯಂತ್ರಿತ ಯಂತ್ರಗಳು, ಹೂವಿನಕುಂಡಗಳಲ್ಲಿ ಪ್ರತಿ ವಾರ ನೀರನ್ನು ಖಾಲಿ ಮಾಡಬೇಕು’ ಎಂದು ಇಲಾಖೆ ಹೇಳಿದೆ.

ಡೆಂಗ್ಯೂ, ಚಿಕೂನ್ ಗುನ್ಯಾ ಜ್ವರದ ಲಕ್ಷಣಗಳು:
* ತೀವ್ರ ಜ್ವರ
* ಮೈ-ಕೈ ನೋವು ಮತ್ತು ಕೀಲು ನೋವು
* ತೀವ್ರತರ ತಲೆನೋವು
* ಕಣ್ಣುಗಳಿಗೆ ಆಯಾಸದ ಅನುಭವ
* ವಾಕರಿಕೆ ಮತ್ತು ವಾಂತಿ
* ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು
* ಬಾಯಿ, ಮೂಗು ಮತ್ತು ಒಸಡುಗಳಲ್ಲಿ ರಕ್ತಸ್ರಾವ

TAGGED:bengaluruchikungunya feverdenguemosquitoPublic TVಚಿಕನ್ ಗುನ್ಯಾ ಜ್ವರಡೆಂಗ್ಯೂಪಬ್ಲಿಕ್ ಟಿವಿಬೆಂಗಳೂರುಸೊಳ್ಳೆ
Share This Article
Facebook Whatsapp Whatsapp Telegram

You Might Also Like

01 6
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-1

Public TV
By Public TV
45 seconds ago
02 7
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-2

Public TV
By Public TV
2 minutes ago
03 3
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-3

Public TV
By Public TV
4 minutes ago
fauja singh Dead
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ವಿಶ್ವದ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಸಾವು

Public TV
By Public TV
6 minutes ago
Ukrainian PM Denys Shmyhal
Latest

ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

Public TV
By Public TV
14 minutes ago
Chinnaswamy Stampede 1
Bengaluru City

ಬೆಂಗಳೂರು ಕಾಲ್ತುಳಿತ ಕೇಸ್‌ – ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Public TV
By Public TV
28 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?