ಚಿಕ್ಕೋಡಿ(ಬೆಳಗಾವಿ): ಜಿಲ್ಲೆಗೆ ಇಂದು ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಸಿಎಂ ಅಗಮನ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಹಂಪ್ಸ್ ರಹಿತ ಸಂಚಾರ ಒದಗಿಸುವ ನಿಟ್ಟಿನಲ್ಲಿ ಸಿಎಂ ಸಂಚರಿಸುವ ಮಾರ್ಗದೆಲ್ಲೆಡೆ ರೋಡ್ ಹಂಪ್ಸ್ ತೆರವುಗೊಳಿಸಲಾಗಿದೆ.
ಶಾಲಾ ಕಾಲೇಜುಗಳ ಬಳಿ ಅಳವಡಿಸಿದ್ದ ರೋಡ್ ಹಂಪ್ಸ್‍ಗಳನ್ನು ಸಹ ತೆರವುಗೊಳಿಸಲಾಗಿದೆ. ಸ್ಪೀಡ್ ಬ್ರೇಕರ್ ತೆರವಿನಿಂದ ಅಪಘಾತಗಳು ಸಂಭವಿಸಿದರೇ ಯಾರು ಹೊಣೆ? ಜನಸಾಮಾನ್ಯರಿಗೆ ಒಂದು ನ್ಯಾಯ ಸಿಎಂ ಹಾಗೂ ಸಚಿವರಿಗೆ ಒಂದು ನ್ಯಾಯನಾ ಎಂದು ಲೋಕೋಪಯೋಗಿ ಇಲಾಖೆ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂಕೋರ್ಟ್ ಇಮೇಲ್‍ಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆಗೆ ಬ್ರೇಕ್
ರಾಜ್ಯದ ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಸ್ತೆ ರೀಪೇರಿ ಮಾಡುವುದು. ರೋಡ್ ಹಂಪ್ಸ್ ತೆರುವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ಜನರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ನಮ್ಮ ಹಣದಲ್ಲಿ ಅಧಿಕಾರಿಗಳು ಹಾಗೂ ಸಚಿವರು ದರ್ಬಾರ್ ನಡೆಸುತ್ತಿದ್ದಾರೆ ಎಂದು ಸ್ಥಳೀಯ ಜನರು ಬೇಸರ ವ್ಯಕ್ತಪಡಿಸಿದ್ದಾರೆ.