ಗದಗ: ನಾನೇ ಮುಖ್ಯಮಂತ್ರಿಯಾಗಿದ್ರೂ ಕಾಲ ಮಿತಿಯಲ್ಲಿ 2ಎ ಮೀಸಲಾತಿ ತರಲು ಸಾಧ್ಯವಿಲ್ಲ. ಯತ್ನ ನಡೆದಿದೆ ಕಾಯಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಯಡಿಯೂರಪ್ಪನವರಿಗೆ ಮನಸ್ಸಿರಲಿಲ್ಲ ಎನ್ನುವುದನ್ನು ಒಪ್ಪಲ್ಲ ಎಂದು ಹೇಲುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದರು. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ
ಸಮಾಜಕ್ಕೆ 2ಬಿ ಕೊಟ್ಟಿದ್ದೇ ಯಡಿಯೂರಪ್ಪನವರು. ಈಗ ನಾವು 2ಎ ಕೇಳಲು ಸಮರ್ಥರಾಗಿದ್ದೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವೆ. ನಮ್ಮ ಸಮಾಜಕ್ಕೆ ನ್ಯಾಯ ಸಿಗಬೇಕು ಅನ್ನೋದು ನಂದೂ ಬೇಡಿಕೆಯಿದೆ. ಆದರೆ ಅದರ ಜೊತೆಗೆ ಬೇರೆ ಸಮಾಜದವರಿಗೆ ಅನ್ಯಾಯವಾಗಬಾರದು. ಮೀಸಲಾತಿ 50 ಪ್ರತಿಶತ ಮೀರಬಾರದು ಎಂಬ ನಿಯಮವಿದೆ. ಸಂವಿಧಾನದ ಚೌಕಟ್ಟಿನಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡಲು ಪ್ರಯತ್ನಿಸುತ್ತೇವೆ ಎಂದರು.
ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಜ್ಞೆ ಪಂಚಾಯತ್ ಮಾಡುತ್ತಿದ್ದಾರೆ. ಮೀಸಲಾತಿಗೆ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿ ಧರಣಿ ನಡೆಸುವುದು ಸರಿಯಲ್ಲ. ಸೋಮವಾರ ಸ್ವಾಮೀಜಿಯವರನ್ನು ಭೇಟಿಯಾಗಿ ಪ್ರತಿಭಟನೆ ಮಾಡದಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು. ಈ ವೇಳೆ ದ್ರಾಕ್ಷಾರಸ ನಿಗಮ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನಸಾಲಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಎಸ್ ಕರಿಗೌಡ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.