2022ರ ಪ್ರೇಮಿಗಳ ದಿನ ಬರಲಿದೆ ‘ಲಾಲ್ ಸಿಂಗ್ ಚಡ್ಡಾ’

Public TV
2 Min Read
amir khan films

ಮುಂಬೈ: ಪ್ರೇಮಿಗಳ ದಿನದಂದು ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ರಿಲೀಸ್ ಮಾಡುವುದಾಗಿ ಎಂದು ಅಮೀರ್ ಖಾನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ.

ಅಮೀರ್ ಖಾನ್ ಪ್ರೊಡಕ್ಷನ್ಸ್ ಇನ್‍ಸ್ಟಾಗ್ರಾಮ್ ನಲ್ಲಿ, ಅಕ್ಟೋಬರ್ 22 ರಿಂದ ಚಿತ್ರಮಂದಿರಗಳನ್ನು ಮತ್ತೆ ತೆರೆಯಲು ಆಡಳಿತವು ಅವಕಾಶ ನೀಡಿದೆ. ಈ ಕೊರೊನಾ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ನಮ್ಮ ಸಿನಿಮಾ ರಿಲೀಸ್ ಮಾಡಲು ವಿಳಂಬವಾಗಿದೆ. ನಮ್ಮ ‘ಲಾಲ್ ಸಿಂಗ್ ಚಡ್ಡಾ’ ಈ ಕ್ರಿಸ್‍ಮಸ್‍ನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ. 2022ರ ಫೆ.14 ರಂದು ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತೆ ಎಂದು ಬರೆದು ಪೋಸ್ಟ್ ಮಾಡಿದೆ. ಇದನ್ನೂ ಓದಿ: ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

ಅಮೀರ್ ಖಾನ್ ಪ್ರೊಡಕ್ಷನ್ಸ್ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ರಣವೀರ್ ಸಿಂಗ್ ಇನ್‍ಸ್ಟಾಗ್ರಾಮ್ ನಲ್ಲಿ, ’83’ ಸಿನಿಮಾ ಈ ಕ್ರಿಸ್‍ಮಸ್‍ನಲ್ಲಿ ಚಿತ್ರಮಂದಿರಕ್ಕೆ ಬರಲಿದೆ. ಈ ಸಿನಿಮಾ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಇವರ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.

ರಣವೀರ್ ನಟನೆಯ ’83’ ಸಿನಿಮಾ ಈ ಜೂನ್‍ನಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ತಡವಾಗಿತ್ತು. ಅದು ಅಲ್ಲದೇ ದೊಡ್ಡ ಬಾಲಿವುಡ್ ಎಷ್ಟೋ ಸಿನಿಮಾಗಳು ಓಟಿಟಿ ಪ್ಲಾಟ್‍ಫಾರ್ಮ್‍ಗಳಲ್ಲಿ ಬಿಡುಗಡೆಯಾಯಿತು. ಅದರಲ್ಲಿ ’83’ ಸಿನಿಮಾ ಸಹ ಒಂದಾಗಬೇಕಿತ್ತು. ಆದರೆ ಚಿತ್ರತಂಡ ಲಾಕ್‍ಡೌನ್ ನಂತರ ಚಿತ್ರಮಂದಿರಗಳಲ್ಲೇ ಸಿನಿಮಾ ಬಿಡುಗಡೆ ಮಾಡುವುದಾಗಿ ತಯಾರಕರು ಅಧಿಕೃತವಾಗಿ ಘೋಷಿಸಿದ್ದರು. ಇಂದು ಆ ಮಾತಿನಂತೆ ಬಿಡುಗಡೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಿಕಿನಿ ತೊಟ್ಟು ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ ಹೆಬ್ಬುಲಿ ಬೆಡಗಿ

 

View this post on Instagram

 

A post shared by Ranveer Singh (@ranveersingh)

’83’ ಸಿನಿಮಾಗೆ ಕಬೀರ್ ಖಾನ್ ಆಕ್ಷನ್ ಕಟ್ ಹೇಳುತ್ತಿದ್ದು, ಕ್ರಿಕೆಟರ್ ಕಪಿಲ್ ದೇವ್ ದಂತ ಕಥೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗುತ್ತಿದೆ. ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್ ಕಾಣಿಸಿಕೊಳ್ಳುತ್ತಿದ್ದು, ಇದು 1983 ರ ಭಾರತದ ಐತಿಹಾಸಿಕ ವಿಶ್ವಕಪ್ ಗೆಲುವಿನ ಕಥೆಯನ್ನು ಆಧರಿಸಿದೆ. ಕಪಿಲ್ ದೇವ್ ಅವರ ಪತ್ನಿ ರೋಮಿ ಪಾತ್ರದಲ್ಲಿ ರಣವೀರ್ ಪತ್ನಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *