Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭಾರತ್ ಬಂದ್: 100ಕ್ಕೂ ಹೆಚ್ಚು ರೈತರ ಬಂಧನ, ಬಿಡುಗಡೆ

Public TV
Last updated: September 27, 2021 5:32 pm
Public TV
Share
2 Min Read
kuruburu shantakumar 12
SHARE

ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್ ಬೆಂಬಲಿಸಲು ಬಂದಿದ್ದ 100ಕ್ಕೂ ಹೆಚ್ಚು ರೈತರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ.

kuruburu 16ಮೌರ್ಯ ಸರ್ಕಲ್‍ನಲ್ಲಿ ಒಂದುಗೂಡಿ ವಿನೂತನ ರೀತಿಯ ಮೆರವಣಿಗೆ ನಡೆಸಲು ರೈತರು ಯತ್ನಿಸಿದ್ದಾರೆ. ಈ ವೇಳೆ ರೈತ ಮುಖಂಡರನ್ನು ಬಂಧಿಸಲು ಯತ್ನಿಸಿದಾಗ ಪೊಲೀಸರು ಹಾಗೂ ರೈತರ ನಡುವೆ ಭಾರಿ ವಾಗ್ವಾದ ನಡೆಯಿತು. ಏಕೆ ಬಂಧನ ಮಾಡುತ್ತೀರಿ, ನಾವು ಮೆರವಣಿಗೆಯನ್ನೇ ಆರಂಭಿಸಿಲ್ಲ, ನಮ್ಮ ರೈತರು ಬರುತ್ತಿದ್ದಾರೆ. ಅಲ್ಲಿ ತನಕ ಊರಿನಿಂದ ತಂದಿರುವ ತಿಂಡಿಯನ್ನು ತಿಂದು ಮುಂದೆ ಸಾಗುತ್ತೇವೆ ಎಂದು ರೈತರು ಪೊಲೀಸರ ಬಳಿ ಹೇಳಿದ್ದಾರೆ. ಇದನ್ನೂ ಓದಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

kuruburu shantakumar11ಇದಕ್ಕೆ ಅವಕಾಶ ನೀಡದ ಪೊಲೀಸರು, ಯಾವುದೇ ಪ್ರತಿ ಉತ್ತರ ನೀಡದೆ ರೈತರನ್ನು ಬಂಧಿಸಿದರು. ಪೊಲೀಸರ ಈ ನಡೆಯನ್ನು ಖಂಡಿಸಿದ ಕುರುಬೂರು ಶಾಂತಕುಮಾರ್, ಕಾನೂನುಬಾಹಿರ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಪೊಲೀಸರ ಸರ್ವಾಧಿಕಾರಿ ಧೋರಣೆಯಾಗಿದೆ. ಇದನ್ನು ನಾವು ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ. ಕೇಂದ್ರದ ಕೆಲವು ಮಂತ್ರಿಗಳು ರೈತ ಚಳುವಳಿಯ ಬಗ್ಗೆ ಹಗುರವಾಗಿ ಕೋಲೆ ಬಸವನ ರೀತಿ ಮಾತನಾಡುತ್ತಿದ್ದಾರೆ. ಇವರಿಗೆ ಕೃಷಿ ಕಾಯ್ದೆಗಳ ದುಷ್ಪರಿಣಾಮಗಳ ಬಗ್ಗೆ ಅರಿವೇ ಇಲ್ಲ ಬೇಕಿದ್ದರೆ ರೈತ ಮುಖಂಡರ ಸಭೆ ಕರೆದು ಚರ್ಚಿಸಲಿ ಎಂದು ಬಹಿರಂಗ ಸವಾಲು ಹಾಕಿದರು. ಇದನ್ನೂ ಓದಿ: ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ

kuruburu 14ರೈತರು ಉತ್ಪನ್ನಗಳನ್ನ ಎಲ್ಲಿ ಬೇಕಾದರೂ ಯಾರಿಗಾದರೂ ಮಾರಾಟ ಮಾಡಬಹುದು ಎನ್ನುತ್ತಾರೆ. ನಾವು ವಿಧಾನಸೌಧಕ್ಕೆ ಹಣ್ಣು ತರಕಾರಿಗಳನ್ನ ಮಾರಲು ಹೋಗುತ್ತಿದ್ದರೆ ಪೊಲೀಸರೇ ತಡೆಯುತ್ತಿದ್ದಾರೆ. ಇಂತಹ ನಡೆ ರೈತರ ಕಣ್ಣಿಗೆ ಮಣ್ಣೆರಚುವ ಕೇಂದ್ರ ಸರ್ಕಾರದ ಕುತಂತ್ರವಲ್ಲವೇ ಎಂದು ಕಿಡಿಕಾರಿದರು. ವಿಧಾನಸೌಧ ಬಳಿ ಎತ್ತಿನಗಾಡಿ ಕುದುರೆಗಾಡಿ ಪ್ರತಿಭಟನೆ ನಡೆಸುವಾಗ ಯಾವುದನ್ನೂ ಕೇಳದ ಪೊಲೀಸರು, ನಮ್ಮನ್ನ ಮಾತ್ರ ಅನುಮತಿ ಪಡೆಯಲಾಗಿದೆಯೇ ಎಂದು ಕೇಳುತ್ತಾರೆ. ಇದು ಪೊಲೀಸರ ಕಾರ್ಯವೈಖರಿ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರ ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ನವೆಂಬರ್ 26ಕ್ಕೆ ಹೋರಾಟಕ್ಕೆ ಒಂದು ವರ್ಷ ತುಂಬುತ್ತದೆ. ಆಗ ದೇಶದ ಎಲ್ಲಾ ರಾಜ್ಯಗಳಿಂದ 5 ಕೋಟಿಗೂ ಹೆಚ್ಚು ರೈತರು ದೆಹಲಿ ಪ್ರವೇಶ ಮಾಡುತ್ತಾರೆ. ಸರ್ಕಾರದ ಯಾವುದೇ ಕುತಂತ್ರದ ಕಾರ್ಯತಂತ್ರಗಳಿಗೂ ನಾವು ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.

kurubur17ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ನಾರಾಯಣ ರೆಡ್ಡಿ ಮಾತನಾಡಿ, ರೈತರು ಕರೆ ನೀಡಿರುವ ಭಾರತ್ ಬಂದ್ ವಿಫಲಗೊಳಿಸಲು ಸರ್ಕಾರ ಪೊಲೀಸ್ ಬಲದ ಮೂಲಕ ಯತ್ನಿಸುತ್ತಿದೆ. ಪೊಲೀಸರು ಕಾನೂನು ಪಾಲಕರಾಗದೇ ಮಂತ್ರಿಗಳ ಗುಲಾಮರ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದರು.

ನೂರಕ್ಕೂ ಹೆಚ್ಚು ರೈತರನ್ನು ಪೊಲೀಸರು ಆಡುಗೋಡಿ ಪೊಲೀಸ್ ಮೈದಾನಕ್ಕೆ ಕರೆದೊಯ್ದಾಗ ಅಲ್ಲಿ ರೈತರು 1 ಗಂಟೆ ಕಾಲ ಬಸ್ಸಿನಿಂದ ಕೆಳಗೆ ಇಳಿಯದೆ ಪೊಲೀಸರ ಕಾನೂನುಬಾಹಿರ ವರ್ತನೆಯನ್ನ ಖಂಡಿಸಿದ್ದಾರೆ. 3 ಗಂಟೆ ನಂತರ ಬಂಧಿತ ರೈತರು, ರೈತ ಮಹಿಳೆಯರು, ಬೀದಿ ಬದಿ ವ್ಯಾಪಾರಿಗಳನ್ನು ಬಿಡುಗಡೆಗೊಳಿಸಿದರು. ಪ್ರತಿಭಟನೆಯಲ್ಲಿ ಅಂದಪ್ಪ ಕೊಳೂರ, ಬೆಂಗಳೂರು ನಗರಾಧ್ಯಕ್ಷೆ ಶಿವಮ್ಮ, ಚನ್ನರಾಯಪಟ್ಟಣದ ಪ್ರೇಮ, ಮೈಸೂರು ಜಿಲ್ಲೆಯ ನಾಗರಾಜ್, ಪ್ರಜಾ ಪರಿವರ್ತನಾ ವೇದಿಕೆಯ ಗೋವಿಂದರಾಜು ಹೆಸರಘಟ್ಟ, ಶಿವರುದ್ರಪ್ಪ ಇನ್ನು ಮುಂತಾದವರಿದ್ದರು.

 

TAGGED:bengaluruBharath BandKuruburu Shanthakumarpolice departmentಕುರುಬೂರು ಶಾಂತಕುಮಾರ್ಪೊಲೀಸ್ ಇಲಾಖೆಬೆಂಗಳೂರುಭಾರತ್ ಬಂದ್ರಾಜ್ಯ ಸರ್ಕಾರರೈತರು
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
5 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
6 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
10 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
11 hours ago

You Might Also Like

devimane ghat road
Latest

ಕಾರವಾರ-ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

Public TV
By Public TV
3 hours ago
tilak varma suryakumar yadav
Cricket

ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

Public TV
By Public TV
3 hours ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
3 hours ago
DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
3 hours ago
Air Force Rescues 14 People Stranded In River On Assam Arunachal Pradesh Border
Latest

ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

Public TV
By Public TV
3 hours ago
Uttar Pradesh Marriage
Crime

ಕೂಲರ್‌ಗಾಗಿ ಬೀಗರ ಮಧ್ಯೆ ಜಗಳ – ಕುರ್ಚಿ ಎಸೆದು ಅಟ್ಟಾಡಿಸಿದ ವಿಡಿಯೋ ವೈರಲ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?