ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹಲಗಾಪುರ ಗಸ್ತಿನಲ್ಲಿ ಒಣಗಿಸಿದ್ದ ಜಿಂಕೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಹನೂರು ತಾಲೂಕಿನ ಕಳ್ಳಿದೊಡ್ಡಿ ಗ್ರಾಮದ ರಾಮಾಚಾರಿ (64) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ಗಾಣಿಗಮಂಗಲ ಗ್ರಾಮದ ಸಣ್ಣಪ್ಪ ಪರಾರಿಯಾಗಿದ್ದಾನೆ. ಸಣ್ಣಪ್ಪ ಶನಿವಾರ ಗಾಣಿಗಮಂಗಲದ ಸಮೀಪದ ಕಾವೇರಿ ವನ್ಯಜೀವಿ ವಿಭಾಗಕ್ಕೆ ಸೇರಿದ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ. ನಂತರ ಅಲ್ಲಿ ಜಿಂಕೆಯನ್ನು ಭೇಟೆಯಾಡಿ ಅದರ ಮಾಂಸವನ್ನು ಒಣಗಿಸಿ ರಾಮಾಚಾರಿ ಎಂಬಾತನಿಗೆ ನೀಡಿದ್ದಾನೆ. ಇದನ್ನೂ ಓದಿ: ಮಳೆಯಿಂದ ಹಾಸ್ಟೆಲ್ ಜಲಾವೃತ: ರಾತ್ರಿಯಿಡೀ ಛಾವಣಿ ಹತ್ತಿ ಕುಳಿತ ವಿದ್ಯಾರ್ಥಿಗಳು
ಬೈಕ್‍ನಲ್ಲಿ ಮಾಂಸ ಸಾಗಿಸುತ್ತಿದ್ದ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು, ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಜಿಂಕೆ ಮಾಂಸ ಹಾಗೂ ಘಟನೆಗೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ತಲೆ ಮರೆಸಿಕೊಂಡಿರುವ ಮತ್ತೊಬ್ಬ ಪ್ರಮುಖ ಆರೋಪಿಗಾಗಿ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ. ಇದನ್ನೂ ಓದಿ: ನಟಿ ವಿಜಯಲಕ್ಷ್ಮಿ ತಾಯಿ ನಿಧನ