ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ಅವರು ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಚೇರಿಗೆ ಭೇಟಿ ನೀಡಿದ್ದಾರೆ.
ಇದೇ ವೇಳೆ ಪುನೀತ್ ಹಾಗೂ ಜಗ್ಗೇಶ್ ಜೊತೆ ಟೈಮ್ ಪಾಸ್ ಮಾಡಿದ ಸಂತೋಷ್ ಆನಂದ್‍ರಾಮ್ ಇಬ್ಬರೊಟ್ಟಿಗೆ ಫೋಟೋ ಕ್ಲಿಕ್ಕಿಸಿಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ ಪುನೀತ್ ರಾಜ್‍ಕುಮಾರ್ ಹಾಗೂ ಜಗ್ಗೇಶ್ ಅವರೊಂದಿಗೆ ನಮ್ಮ ಕಚೇರಿಯಲ್ಲಿ ಉತ್ತಮ ಸಮಯ ಕಳೆದೆ ಎಂದು ಹಾರ್ಟ್ ಎಮೋಜಿ ಹಾಕಿ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೀವೂ ಮಾಡಿ ಗರಿಗರಿಯಾದ ಚಿಕನ್ ಪಕೋಡಾ
View this post on Instagram
ಇತ್ತೀಚೆಗಷ್ಟೇ ಸಂತೋಷ್ ಆನಂದ್ ರಾಮ್, ಪುನೀತ್ ಮತ್ತು ಹೊಂಬಾಳೆ ಫಿಲ್ಮ್ ಕಾಂಬಿನೇಷನ್‍ನಲ್ಲಿ ಮತ್ತೊಂದು ಹೊಸ ಸಿನಿಮಾ ಸೆಟ್ಟೇರುತ್ತಿರುವ ಬಗ್ಗೆ ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದರು.
To All the Fans & Audience who are continuously asking About my film with Power star @PuneethRajkumar sir in association with @hombalefilms will start by Early Next year????Thanks for the love❤️ “ನಿಮ್ಮ ಅಭಿಮಾನ ನಮಗೆ ಶ್ರೀರಕ್ಷೆ” pic.twitter.com/8J1ic0SgdT
— Santhosh Ananddram (@SanthoshAnand15) September 18, 2021
ಈ ಮುನ್ನ 2017ರಲ್ಲಿ ತೆರೆಕಂಡ ಪುನೀತ್ ಅಭಿನಯದ ರಾಜಕುಮಾರ ಸಿನಿಮಾಕ್ಕೆ ಸಂತೋಷ್ ಆನಂದ್ ರಾಮ್ ಆ್ಯಕ್ಷನ್ ಕಟ್ ಹೇಳಿದ್ದರು. ಈ ಸಿನಿಮಾ ಸ್ಯಾಂಡಲ್‍ವುಡ್ ಬಾಕ್ಸ್ ಆಫೀಸ್‍ನಲ್ಲಿ ಸಾಕಷ್ಟು ಸದ್ದು ಮಾಡುವುದರ ಜೊತೆಗೆ ಫ್ಯಾಮಿಲಿ ಪ್ರೇಕ್ಷಕರ ಮನ ಗೆದ್ದಿತ್ತು. ನಂತರ ಯುವರತ್ನ ಸಿನಿಮಾದ ಮೂಲಕ ಸಂತೋಷ್ ಆನಂದ್ ರಾಮ್ ಪುನೀತ್‍ಗೆ ಮತ್ತೊಮ್ಮೆ ಆ್ಯಕ್ಷನ್ ಕಟ್ ಹೇಳಿದ್ದರು. ಇದೀಗ ಮತ್ತೆ ಈ ಜೋಡಿ ಹೊಸ ಸಿನಿಮಾಕ್ಕೆ ಕೈ ಜೋಡಿಸಲಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್