ಶೌಚಾಲಯ ಬಳಕೆಗೆ ಗಲಾಟೆ-9 ಮಂದಿ ಪೊಲೀಸ್ ವಶಕ್ಕೆ

Public TV
1 Min Read
Toilet1

ನವದೆಹಲಿ: ಶೌಚಾಲಯ ಬಳಕೆಯ ವಿಷಯವಾಗಿ ಗೀತಾ ಕಾಲೋನಿಯ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಮೂವರಿಗೆ ತೀವ್ರ ಗಾಯಗಳಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ದೆಹಲಿಯಲ್ಲಿ ನಡೆದಿದೆ.

ಬುದ್ಧ್ ಬಜಾರ್ ಸ್ಲಮ್, ಗೀತ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸ್ ಗೆ ಘಟನೆ ಕುರಿತು ಮಾಹಿತಿ ನೀಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ:  ಮಕ್ಕಳ ಸ್ನೇಹ ಬೆಳೆಸಿದ ಕಾಡು ಗಿಳಿ- ಫೋಟೋ ವೈರಲ್

Police Jeep

ಘಟನೆ ಸಂಬಂಧ ನಮಗೆ ದೂರು ಕರೆಯೊಂದು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಶೌಚಾಲಯಕ್ಕೆ ಸಮೀಪದಲ್ಲಿದ್ದ ಒಂದು ಗುಂಪು, ದೂರದಲ್ಲಿದ್ದ ಮತ್ತೊಂದು ಗುಂಪು ಪರಸ್ಪರ ಕಲ್ಲುತೂರಾಟದಲ್ಲಿ ತೊಡಗಿದ್ದವು. ಎರಡೂ ಗುಂಪುಗಳು ಪರಸ್ಪರ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ಎರಡೂ ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *