ನವದೆಹಲಿ: ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕುಸ್ತಿಪಟು ಸುಶೀಲ್ ಕುಮಾರ್ ದೆಹಲಿಯ ರೋಹಿಣಿ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4ರಂದು ಸಾಗರ್ ರಾಣಾ ಕೊಲೆಯಾಗಿದ್ದರು. ಬಳಿಕ ಸುಶೀಲ್ ಹಾಗೂ ಸಾಗರ್ ರಾಣಾ ನಡುವಣ ಘರ್ಷಣೆಯಲ್ಲಿ ಸಾಗರ್ ಹತ್ಯೆಗೀಡಾಗಿದ್ದರು ಎಂದು ವರದಿಯಾಗಿತ್ತು. ನಂತರ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಸುಶೀಲ್ ಕುಮಾರ್ ಮತ್ತು ಅವರ ಸ್ನೇಹಿತನನ್ನು ಮೇ 23ರಂದು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದರು. ಇದನ್ನೂ ಓದಿ: ಕುಸ್ತಿಪಟು ಸುಶೀಲ್ ಕುಮಾರ್ಗೆ 14 ದಿನ ನ್ಯಾಯಾಂಗ ಬಂಧನ
Wrestler Sushil Kumar moves a regular bail plea in the Rohini Court in the connection with the murder of 23-year-old Sagar Rana at Delhi's Chhatrasal Stadium. He was arrested by the Delhi Police on 23rd May this year.
(file photo) pic.twitter.com/JUtbtOlPv2
— ANI (@ANI) October 4, 2021
ದೆಹಲಿ ನ್ಯಾಯಾಲಯ ಸುಶೀಲ್ ಕುಮಾರ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸುಶೀಲ್ ಕುಮಾರ್ ಜಾಮೀನು ಕೋರಿ ಅರ್ಜಿಸಲ್ಲಿಸಿದ್ದಾರೆ. ಇದನ್ನೂ ಓದಿ: ಪಂಡೋರಾ ಪೇಪರ್ ರಹಸ್ಯ- ಸಚಿನ್ ತೆಂಡೂಲ್ಕರ್ ಹೆಸರು ಉಲ್ಲೇಖ