ನವದೆಹಲಿ: 300 ರೂಪಾಯಿ ಸಾಲ ಮರುಪಾವತಿಸದಕ್ಕೆ ಅಪ್ರಾಪ್ತ ಬಾಲಕರಿಬ್ಬರು ಸೇರಿದಂತೆ ಐವರು ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ದುರ್ದೈವಿಯನ್ನು ಶೈಲೇಂದ್ರ ಎಂದು ಗುರುತಿಸಲಾಗಿದ್ದು, ಅವರು ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಕೆಮಿಸ್ಟ್ ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಅಪ್ರಾಪ್ತ ಬಾಲಕರಿಬ್ಬರನ್ನು ಸೇರಿಸಿದಂತೆ, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: WhatsApp, Facebook, Instagram 9 ಗಂಟೆ ಬಂದ್ – ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ
ಶೈಲೇಂದ್ರ ಅವರು ರವಿಯಿಂದ ವಹಿವಾಟಿನ ವಿಚಾರವಾಗಿ 300 ರೂ. ಸಾಲವನ್ನು ಪಡೆದಿದ್ದರು. ಅದನ್ನು ಹಿಂದಿರುಗಿಸುವಂತೆ ಕೇಳಿದಾಗ ಇಬ್ಬರ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಆರೋಪಿಗಳು ಶೈಲೇಂದ್ರ ಅವರನ್ನು ಹತ್ಯೆಗೈದಿದ್ದಾರೆ. ಸದ್ಯ ಪ್ರಕರಣ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: WhatsApp, Facebook, ಇನ್‌ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ – ಮೆಸೇಜ್ ಹೋಗ್ತಿಲ್ಲ, ಬರ್ತಿಲ್ಲ..!