ಸಮಂತಾ, ನಾಗ ಚೈತನ್ಯ DIVORCEಗೆ ಅಸಲಿ ಕಾರಣ ಬಯಲು

Public TV
2 Min Read
samantha 3

ಹೈದರಾಬಾದ್: ಟಾಲಿವುಡ್‍ನ ಕ್ಯೂಟ್ ಕಪಲ್ ಸಮಂತಾ, ನಾಗ ಚೈತನ್ಯ ಡಿವೋರ್ಸ್ ಪಡೆದುಕೊಂಡಿರುವುದು ಗೊತ್ತಿರುವ ವಿಚಾರವಾಗಿದೆ. ಆದರೆ ಇವರ ಮಧ್ಯೆ ಇದ್ದಕ್ಕಿದ್ದ ಹಾಗೇ ಬಿರುಕು ಮೂಡಲು ಕಾರಣವೇನು ಎಂದು ಅಭಿಮಾನಿಗಳು ಕೇಳುತ್ತಿದ್ದರು. ಆದರೆ ಸೋಶಿಯಲ್ ಮೀಡಿಯಾದಲ್ಲಿ ಅಂತೆ ಕಂತೆ ವಿಚಾರಗಳು ಹರಿದಾಡುತ್ತಿವೆ.

naga chaitanya samantha engagement stillssd medium

ಸಮಂತಾ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಮದುವೆ ನಂತರ ತೆರೆಕಂಡ ರಂಗಸ್ಥಲಂ, ಮಜಿಲಿ ಸೇರಿ ಅನೇಕ ಸಿನಿಮಾಗಳು ಯಶಸ್ಸು ಕಂಡಿವೆ. ಆದರೆ ನಾಗ ಚೈತನ್ಯ ವೃತ್ತಿ ಜೀವನದಲ್ಲಿ ಸಾಕಷ್ಟು ಸೋಲುಗಳನ್ನು ಕಾಣುತ್ತಿದ್ದಾರೆ. ಅವರ ನಟನೆಯ ಮಜಿಲಿ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಆದರೆ ಅಭಿಮಾನಿಗಳು ಸಿನಿಮಾ ಯಶಸ್ಸನ್ನು ಈ ಚಿತ್ರದಲ್ಲಿ ಮುಖ್ಯಪಾತ್ರ ಮಾಡಿದ ಸಮಂತಾಗೆ ನೀಡಿದರು. ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ ಎನ್ನಲಾಗುತ್ತಿದೆ. ದಿ ಫ್ಯಾಮಿಲಿ ಮ್ಯಾನ್ 2 ಯಶಸ್ಸಿನ ನಂತರ ಬಾಲಿವುಡ್ ಮಂದಿ ಸಮಂತಾ ಮನೆ ಬಾಗಿಲು ತಟ್ಟುತ್ತಿದ್ದಾರೆ. ಈ ವಿಚಾರದಲ್ಲಿ ನಾಗ ಚೈತನ್ಯ ಸಾಕಷ್ಟು ಹೊಟ್ಟೆಕಿಚ್ಚು ಮಾಡಿಕೊಳ್ಳುತ್ತಿದ್ದರು ಎಂದು ವರದಿ ಆಗಿದೆ.ಇದನ್ನೂ ಓದಿ : ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು: ಸಮಂತಾ

samantha medium

ನಾಗ ಚೈತನ್ಯಗೆ ಮಕ್ಕಳನ್ನು ಆಡಿಸುವ ಆಸೆ ಇತ್ತು. ಆದರೆ ಸಮಂತಾಗೆ ಇಷ್ಟು ಬೇಗ ಅದು ಇಷ್ಟವಿರಲಿಲ್ಲ ಎನ್ನುತ್ತಿವೆ ಮೂಲಗಳು. ಮಕ್ಕಳಾದ ನಂತರ ಅದರ ಪಾಲನೆಗೆ ಒಂದಷ್ಟು ವರ್ಷ ಹಿಡಿಯುತ್ತದೆ. ಆ ವೇಳೆಗೆ ಚಿತ್ರರಂಗದಲ್ಲಿ ಬೇಡಿಕೆ ಕುಗ್ಗಿರುತ್ತದೆ. ಈ ಕಾರಣಕ್ಕೆ ಕೆಲ ವರ್ಷ ಬಿಟ್ಟು ಮಗುವನ್ನು ಪಡೆಯುವ ಆಲೋಚನೆ ಸಮಂತಾ ಅವರದ್ದಾಗಿತ್ತು. ಈ ವಿಚಾರಕ್ಕೂ ಇಬ್ಬರ ನಡುವೆ ವಾಗ್ವಾದಗಳು ಏರ್ಪಟ್ಟಿವೆ ಎನ್ನಲಾಗಿದೆ. ಇದನ್ನೂ ಓದಿ :  ವಿಚ್ಛೇದನ ಪಡೆಯುತ್ತಿದ್ದಂತೆ ಹೆಸರು ಬದಲಿಸಿಕೊಂಡ ಸಮಂತಾ

samantha nagachaitanya 1

ಮದುವೆ ಆದ ನಂತರದಲ್ಲಿ ಹೀರೋಯಿನ್‍ಗಳು ಬೋಲ್ಡ್ ಆಗಿ ತೆರೆಮೇಲೆ ಕಾಣಿಸಿಕೊಳ್ಳೋದು ತುಂಬಾನೇ ಅಪರೂಪ. ಕುಟುಂಬದ ಹಿರಿಯರೂ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಸಮಂತಾ ಇದಕ್ಕೆಲ್ಲ ಕೇರ್ ಮಾಡದೇ ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಸಮಂತಾ ವೃತ್ತಿ ಜೀವನದ ದೃಷ್ಟಿಯಲ್ಲಿ ದಿ ಫ್ಯಾಮಿಲಿ ಮ್ಯಾನ್ 2 ಬಹಳ ಮಹತ್ವ ಪಡೆದುಕೊಂಡಿದೆ. ಈ ಕಾರಣಕ್ಕೆ ಅವರು ವೆಬ್ ಸೀರಿಸ್ ಒಪ್ಪಿಕೊಂಡಿದ್ದರು. ಇದಕ್ಕೆ ಕುಟುಂಬದವರ ವಿರೋಧವಿದ್ದರೂ ಅವರು ತಲೆಕೆಡಿಸಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ವಿಚಾರವೇ ಈಗ ಡಿವೋರ್ಸ್‍ವರೆಗೆ ತಂದು ನಿಲ್ಲಿಸಿತು ಎಂದು ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

samantha 2

ಸಮಂತಾ-ನಾಗ ಚೈತನ್ಯ ದಾಂಪತ್ಯ ಮುರಿದು ಬಿದ್ದಿದೆ. ಇದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸಾಕಷ್ಟು ಜನರು ಸಾಕಷ್ಟು ರೀತಿಯಲ್ಲಿ ಚರ್ಚಿಸುತ್ತಿದ್ದಾರೆ. ಈಗ ಈ ಜೋಡಿ ಬೇರೆಯಾಗಿ ಆಗಿದೆ. ಇಬ್ಬರ ವೃತ್ತಿ ಜೀವನದಲ್ಲಿ ಉತ್ತಮ ಯಶಸ್ಸನ್ನು ಕಾಣಲಿ ಎನ್ನುವುದು ಅಭಿಮಾನಿಗಳ ಆಶಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *