ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ

Public TV
2 Min Read
AJAY MISHRA

– ಭಾನುವಾರ ರಾತ್ರಿ ಆ ಸ್ಥಳದಲ್ಲಿ ನನ್ನ ಮಗ ಆಶಿಶ್ ಇರಲೇ ಇಲ್ಲ

ಲಕ್ನೋ: ಉತ್ತರಪ್ರದೇಶ ಲಖೀಂಪುರ್ ಹಿಂಸಾಚಾರದಲ್ಲಿ ರೈತರು ಮೃತಪಟ್ಟಿದ್ದಾರೆ. ಆ ಘಟನೆ ವೇಳೆ ನನ್ನ ಮಗ ಅಲ್ಲಿ ಇದ್ದದ್ದು ನಿಜವಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಹೇಳಿದ್ದಾರೆ. ಇದನ್ನೂ ಓದಿ:  FIR ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಇಂದು ಪ್ರತಿಕ್ರಿಯೆ ನೀಡಿರುವ ಅಜಯ್ ಮಿಶ್ರಾ, ರೈತರ ಹತ್ಯೆ ನಡೆದ ಸ್ಥಳದಲ್ಲಿ ನನ್ನ ಮಗ ಇದ್ದುದಕ್ಕೆ ಸಾಕ್ಷಿ ಸಿಕ್ಕಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದಿದ್ದಾರೆ. ಭಾನುವಾರ ರಾತ್ರಿ ಆ ಸ್ಥಳದಲ್ಲಿ ನನ್ನ ಮಗ ಆಶಿಶ್ ಇರಲೇ ಇಲ್ಲ. ಅವನು ಅಲ್ಲಿದ್ದ ಎಂಬುದಕ್ಕೆ ಯಾವುದೇ ಫೋಟೋ, ವೀಡಿಯೋಗಳ ಸಾಕ್ಷಿಯಿಲ್ಲ. ಆದರೆ ಆತ ಅಲ್ಲಿರಲಿಲ್ಲ ಎಂಬುದಕ್ಕೆ ನನ್ನ ಬಳಿ ವೀಡಿಯೋ ಸಾಕ್ಷಿಗಳಿವೆ. ವಿನಾಕಾರಣ ಅವನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆಶಿಶ್ ಭಾನುವಾರ ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂದು ಅಜಯ್ ಮಿಶ್ರಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:  ನಿರ್ಭೀತ, ನೈಜ ಕಾಂಗ್ರೆಸ್ಸಿಗಳು ಪ್ರಿಯಾಂಕಾ ಗಾಂಧಿ: ರಾಗಾ

lakhimpur

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ, ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೇಶವ ಪ್ರಸಾದ್ ಇದ್ದ ಕಾರನ್ನು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಅದರಲ್ಲಿ ಒಂದು ಖಾರು ಚಲಾಯಿಸಿದ್ದು ಅಜಯ್ ಮಿಶ್ರಾ ಅವರ ಮಗ ಆಶಿಶ್ ಎಂದು ಎಫ್‍ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ:  ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

 

ಲಖಿಂಪುರ ಖೇರಿಯ ಹಿಂಸಾಚಾರದ ಬಳಿಕ ಅಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾಗಲು ಬಂದಿದ್ದ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಜಯ್ ಮಿಶ್ರಾ ಅವರ ಮಗ ಆಶಿಶ್ ಸೇರಿದಂತೆ ಇನ್ನಿತರರ ವಿರುದ್ಧ ಕೇಸ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದಿಂದ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು, ಅವರ ಮಗನನ್ನು ಬಂಧಿಸಬೇಕೆಂಬ ಒತ್ತಾಯಗಳು ಹೆಚ್ಚಾಗಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರದ ರಾಜ್ಯ ಸಚಿವ ಅಜಯ್ ಮಿಶ್ರಾ, ಲಖಿಂಪುರ ಹಿಂಸಾಚಾರದ ಸ್ಥಳದಲ್ಲಿ ನನ್ನ ಮಗ ಇದ್ದುದು ಸಾಬೀತಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಇತ್ತ ಸರ್ಕಾರ ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಹಾಗೂ ಉದ್ಯೋಗ ನೀಡುವ ಭರವಸೆ ನೀಡಿದೆ. ಹಾಗೇ ಗಾಯಾಳುಗಳಿಗೆ 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡುವುದಾಗಿ ಹೇಳಿದೆ.

Share This Article
Leave a Comment

Leave a Reply

Your email address will not be published. Required fields are marked *