ಲಕ್ನೋ: ಲಖಿಂಪುರ್ ಖೇರಿಯಲ್ಲಿ ನಡೆದ ಅವಘಡದ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಿದೆ.
ಇಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆಯಾಗಿದ್ದು, ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರಿಂದ ಸ್ವತಂತ್ರ ತನಿಖೆ ನಡೆಸಲು ತಿರ್ಮಾನಿಸಿದೆ. ಸೆಕ್ಷನ್ 3, 1952 ವಿಚಾರಣಾ ಆಯೋಗದ ಅಧಿನಿಯಮದ (1952ರ ನಂ.60) ಅಡಿಯಲ್ಲಿ ಪ್ರಕರಣ ತನಿಖೆ ನಡೆಸಲು ಸೂಚಿಸಿದ್ದು, ಸಮಿತಿ ರಚನೆಯಾದ ಎರಡು ತಿಂಗಳೊಳಗೆ ಘಟನೆಯ ಸಂಪೂರ್ಣ ಮಾಹಿತಿ ನೀಡುವಂತೆ ಕೋರಲಾಗಿದೆ. ಇದನ್ನೂ ಓದಿ: ಲಖೀಂಪುರ್ ಖೇರಿ ಹಿಂಸಾಚಾರ – ಮೃತ ರೈತರ ಕುಟುಂಬಸ್ಥರನ್ನು ಬಿಗಿದಪ್ಪಿ ರಾಹುಲ್, ಪ್ರಿಯಾಂಕಾ ಸಾಂತ್ವನ
ಕಳೆದ ಭಾನುವಾರ ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಕೃತ್ಯ ನಡೆದಿದ್ದು, 8 ಜನ ಮೃತಪಟ್ಟಿದ್ದಾರೆ. ಸತ್ತವರಲ್ಲಿ ನಾಲ್ವರು ರೈತರಾಗಿದ್ದಾರೆ. ಮೂರು ಮಂದಿ ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ಪತ್ರಕರ್ತ ಒಳಗೊಂಡಿದ್ದಾರೆ. ಈ ಕೃತ್ಯ ಖಂಡಿಸಿ ರೈತರು ಬಿಜೆಪಿ ಕಾರ್ಯಕರ್ತರು ಕಾರು ಚಲಾಯಿಸಿದ್ದ ಕಾರಿನ್ನು ಹೊಡೆದುರುಳಿಸಿ ಬೆಂಕಿ ಹಚ್ಚಿದ್ದರು. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ