ಉಡುಪಿ: ಆರ್‌ಎಸ್‌ಎಸ್ ಸಂಘಟನೆ ಬಗ್ಗೆ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ. ಒಂದು ವರ್ಗದ ವೋಟ್ ಬ್ಯಾಂಕಿಗೆ ಅವರಿಬ್ಬರು ಜೊಲ್ಲು ಸುರಿಸುತ್ತಿದ್ದಾರೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಇವರು ವಿರೋಧಿಸುವಂತದ್ದು ಏನು ಮಾಡಿದೆ ಹೇಳಿ? ಎಂದು ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ನಾನು ಹಿಟ್ ಆ್ಯಂಡ್ ರನ್ ಹೇಳಿಕೆ ನೀಡಲ್ಲ. ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದಿರುವ ಕುಮಾರಸ್ವಾಮಿಗೆ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು. ಇದನ್ನೂ ಓದಿ: ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನ ಕೆಳಗಿಳಿಸಲು RSS ಕಾರಣ: ಹೆಚ್‍ಡಿಕೆ
ನಾನು ಆರ್‌ಎಸ್‌ಎಸ್ , ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಆರ್‍ಎಸ್‍ಎಸ್. ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್ ನಿಂದ ಬಂದವರು. ನಾವು ನಿಮಗೆ ಏನು ತೊಂದರೆ ಮಾಡಿದ್ದೇವೆ ಹೇಳಿ? ಆರ್‌ಎಸ್‌ಎಸ್ ದೇಶಭಕ್ತಿ ಹೇಳಿಕೊಡುವ ದೊಡ್ಡ ಸಂಘಟನೆ. ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.
ವೋಟ್ ಕಿತ್ತುಕೊಳ್ಳಲು ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಕಾಂಪಿಟೇಷನ್ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಬಗ್ಗೆ ಸುದ್ದಿಗೋಷ್ಠಿ ಮಾಡಲಿ. ಎಲ್ಲವೂ ಚರ್ಚೆಯಾಗಲಿ. ಆರ್‌ಎಸ್‌ಎಸ್ ಏನು ಮಾಡುತ್ತಿದೆ ಎಂದು ಎಲ್ಲರಿಗೂ ಗೊತ್ತು. ಏನು ಜಗಜ್ಜಾಹೀರು ಮಾಡುತ್ತಾರೆ ನೋಡೋಣ ಎಂದು ಹೆಚ್‍ಡಿಕೆಗೆ ಆರಗ ಸವಾಲು ಹಾಕಿದರು. ಇದನ್ನೂ ಓದಿ: ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಟಾರ್ಗೆಟ್- ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಅನುಮಾನ