-ಬಿಜೆಪಿಯಾಗಲಿ, ಮೋದಿ ಅವರಾಗಲಿ ಯಾರೂ ನನ್ನ ಸೈಡ್ ಲೈನ್ ಮಾಡಿಲ್ಲ
ಶಿವಮೊಗ್ಗ: ಸಿದ್ದರಾಮಯ್ಯ ಅವರು ಇನ್ನಾದರೂ ಗೌರವಯುತವಾಗಿ ಮಾತನಾಡಬೇಕು. ಇಲ್ಲದಿದ್ದರೆ ಜನರೇ ಅವರಿಗೆ ಪಾಠ ಕಲಿಸುತ್ತಾರೆ ಎಂದಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಟಾಂಗ್ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇತ್ತೀಚೆಗೆ ಬಹಳ ಹಗುರವಾಗಿ ಮಾತನಾಡಲು ಆರಂಭಿಸಿದ್ದಾರೆ. ಒಬ್ಬ ವಿರೋಧ ಪಕ್ಷದ ನಾಯಕರಾಗಿ ಅದು ಅವರಿಗೆ ಶೋಭೆ ತರುವುದಿಲ್ಲ. ಇನ್ನಾದರೂ ನಾಲಿಗೆಯನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಂಡು ಗೌರವಯುತವಾಗಿ ಮಾತನಾಡುವುದನ್ನ ಕಲಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ
ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಪಕ್ಷ ಕಡೆಗಣಿಸಬಾರದು ಎಂದು ಇತ್ತೀಚೆಗೆ ಚಿತ್ರದುರ್ಗದ ಮುರುಘಾ ಶರಣರು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅವರು ನನ್ನನ್ನು ಬಿಜೆಪಿ ಪಕ್ಷವಾಗಲಿ, ನರೇಂದ್ರ ಮೋದಿ ಅವರಾಗಲಿ, ಇನ್ನು ಯಾರೇ ಆಗಲಿ ನನ್ನನ್ನು ಎಂದಿಗೂ ಸೈಡ್ ಲೈನ್ ಮಾಡಿಲ್ಲ ಎಂದು ಮಾಜಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನೂತನ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಕಲಿಕೆಗೆ ಆದ್ಯತೆ: ಗೆಹ್ಲೋಟ್
ಈ ವಿಷಯದ ಬಗ್ಗೆ ನಾನು ಮತ್ತೆ, ಮತ್ತೆ ಬಹಳ ಸ್ಪಷ್ಟಪಡಿಸಲು ಇಚ್ಚೆಪಡುತ್ತೇನೆ. ನಾನೇ ಸ್ವ ಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ, ವಿನಾಃ ನನಗೆ ಯಾರೂ ಸಹ ಒತ್ತಡ ಹೇರಲಿಲ್ಲ. ಇಂತಹ ಗೊಂದಲ ತರುವಂತಹ ಪ್ರಯತ್ನ ಯಾರೂ ಮಾಡಬಾರದು. ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದಿದ್ದಾರೆ.