ಬೆಂಗಳೂರು: ನಗರದಲ್ಲಿ ಮಧ್ಯರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಏರ್‌ಬ್ಯಾಗ್ ಇಬ್ಬರ ಪ್ರಾಣವನ್ನು ಉಳಿಸಿದೆ.
ಮಡಿವಾಳದ ಸೆಂಟ್‍ಜಾನ್ ಆಸ್ಪತ್ರೆ ಸಿಗ್ನಲ್ ಬಳಿ ಇರುವ ಡಿವೈಡರ್‌ಗೆ ಬಲೆನೊ ಕಾರು ಗುದ್ದಿದೆ. ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಚಾಸಿ ತುಂಡಾಗಿದ್ದು ಟಯರ್ 30 ಮೀಟರ್ ದೂರಕ್ಕೆ ಹೋಗಿ ಬಿದ್ದಿದೆ. ಇದನ್ನೂ ಓದಿ: ಇಂದು ಬೆಳಗ್ಗೆ 10 ಗಂಟೆಗೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ
ಗಮನಿಸಬೇಕಾದ ವಿಚಾರ ಅಂದ್ರೆ ಇಬ್ಬರಿಗೂ ಒಂದು ಸಣ್ಣ ಗಾಯವೂ ಆಗಿಲ್ಲ. ಮುಂಭಾಗದಲ್ಲಿದ್ದ ಏರ್ ಬ್ಯಾಗ್ ತೆರೆದ ಪರಿಣಾಮ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದ್ಯದ ನಶೆಯಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಪಘಾತ ಎಸಗಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಬಿಯರ್ ಬಾಟಲ್ ಪತ್ತೆಯಾಗಿದೆ. ವಿದ್ಯಾರ್ಥಿಗಳ ವಿರುದ್ಧ ಡ್ರಿಂಕ್ಸ್ ಆಂಡ್ ಡ್ರೈವ್ ಕೇಸ್ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ತಾಲಿಬಾನ್ ಸರ್ಕಾರದಲ್ಲಿ ಸೂಸೈಡ್ ಬಾಂಬರ್ ಕುಟುಂಬಕ್ಕೆ ನಗದು ಪರಿಹಾರ, ನಿವೇಶನ ಗಿಫ್ಟ್
ಈ ಹಿಂದೆ ಆಗಸ್ಟ್ 31 ರಂದು ಕೋರಮಂಗಲದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿತ್ತು. ಮಂಗಳ ಕಲ್ಯಾಣ ಮಂಟಪದ ಬಳಿ ನಡೆದ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಕೋರಮಂಗಲ ಅಪಘಾತ – 7 ಮಂದಿಯ ಸಾವಿಗೆ ಮದ್ಯ ಪಾರ್ಟಿಯೇ ಕಾರಣ