ಮುಂಬೈ: 26 ಪ್ರಕರಣಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‍ಸಿಬಿ) ಮುಂಬೈ ವಲಯ ಅಧಿಕಾರಿ ಸಮೀರ್ ವಾಂಖೆಡೆ ತನಿಖೆ ನಡೆಸುವಾಗ ಸರಿಯಾದ ನಿಯಮಗಳನ್ನು ಅನುಸರಿಸಿಲ್ಲ ಎಂದು ಮಹಾರಾಷ್ಟ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‍ಸಿಪಿ) ಸಚಿವ ನವಾಬ್ ಮಲಿಕ್ ಆರೋಪಿಸಿದ್ದಾರೆ.
ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಪ್ರಕರಣದ ತನಿಖೆ ನಡೆಸುತ್ತಿರುವ ಸಮೀರ್ ವಾಂಖೆಡೆ ವಿರುದ್ಧವೇ ಲಂಚದ ಆರೋಪ ಕೇಳಿ ಬಂದಿದೆ. ಎರಡು ವರ್ಷಗಳಿಂದ ಏಜೆನ್ಸಿಯೊಂದಿಗೆ ಕೆಲಸ ಮಾಡುತ್ತಿರುವ ಎನ್ ಉದ್ಯೋಗಿಯ ಪತ್ರವನ್ನು ಉಲ್ಲೇಖಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಲಿಕ್ ಅವರು, ಎನ್‍ಸಿಬಿ ಅಧಿಕಾರಿಯಿಂದ ಪತ್ರವನ್ನು ಸ್ವೀಕರಿಸಿದ್ದೇನೆ. ನಾನು ಈ ಪತ್ರವನ್ನು ಡೈರೆಕ್ಟರ್ ಜನರಲ್ ನಾರ್ಕೋಟಿಕ್ಸ್‍ಗೆ ಕಳುಹಿಸುತ್ತಿದ್ದೇನೆ. ಈ ಪತ್ರದ ಪ್ರಕಾರ, 26 ಪ್ರಕರಣಗಳಲ್ಲಿ ಸಮೀರ್ ವಾಂಖೆಡೆ ಅವರು ತನಿಖೆ ನಡೆಸುವಾಗ ಸರಿಯಾದ ನಿಯಮಗಳನ್ನು ಅನುಸರಿಸದಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಅದಕ್ಕೆ ಈ ಕುರಿತು ಸರಿಯಾದ ತನಿಖೆಯಾಗಬೇಕು ಎಂದು ನಾನು ಒತ್ತಾಯಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದು ಕರ್ನಾಟಕದಲ್ಲಿ 277 ಪಾಸಿಟಿವ್, 7 ಸಾವು
ನನ್ನ ಯುದ್ಧವು ಏಜೆನ್ಸಿ ವಿರುದ್ಧ ಅಲ್ಲ. ನಾನು ಅನ್ಯಾಯದ ವಿರುದ್ಧ ಹೋರಾಡುತ್ತಿದ್ದೇನೆ. ನಾನು ವಂಚನೆಯಿಂದ ಕೆಲಸ ಪಡೆದ ಒಬ್ಬ ಅಧಿಕಾರಿಯನ್ನು ಮಾತ್ರ ಬಹಿರಂಗಪಡಿಸುತ್ತಿದ್ದೇನೆ. ಸಮೀರ್ ಅವರು ಎನ್‍ಸಿಬಿ ಉದ್ಯೋಗ ಪಡೆಯಲು ನಕಲಿ ಜನನ ಪ್ರಮಾಣಪತ್ರವನ್ನು ಬಳಸಿದ್ದಾರೆ. ಅವರು ಅಕ್ರಮವಾಗಿ ಕೆಲವರ ಫೋನ್ ಟ್ಯಾಪಿಂಗ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಮೀರ್ ಅವರ ಮೇಲೆ ಆರೋಪಗಳನ್ನು ಸುಳ್ಳು ಮತ್ತು ದುರುದ್ದೇಶಪೂರಿತವಾಗಿ ಮಾಡುತ್ತಿಲ್ಲ. ಕೆಟ್ಟ ಕೆಲಸಗಳಿಗೆ ನಾನು ಎಂದೂ ಬೆಂಬಲ ನೀಡುವುದಿಲ್ಲ. ಇದು ಅವರ ಹಕ್ಕು, ಅವರೂ ತಮ್ಮ ಅಭಿಪ್ರಾಯವನ್ನು ಮಂಡಿಸಬಹುದು ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಸಮೀರ್ ವಾಂಖೆಡೆ ಪತ್ನಿ ಕ್ರಾಂತಿ ರೆಡ್ಕಾರ್, ಇಂತಹ ಪತ್ರಗಳಿಗೆ ಯಾವುದೇ ಆಧಾರಗಳಿಲ್ಲ. ನನ್ನ ಗಂಡ ಯಾವ ತಪ್ಪು ಮಾಡಿಲ್ಲ. ಇದನ್ನು ನಾನು ಸಹಿಸುವುದಿಲ್ಲ. ನಾವೇಕೆ ನ್ಯಾಯಾಲಯಕ್ಕೆ ಹೋಗಬೇಕು? ನಮ್ಮ ವಿರುದ್ಧ ಆರೋಪ ಮಾಡುವವರು ನ್ಯಾಯಾಲಯದ ಮೊರೆ ಹೋಗಬೇಕು. ನಾವು ಕೋಟ್ಯಾಧಿಪತಿಗಳಲ್ಲ. ಸರಳ ಜನ. ಸಮೀರ್ ಒಬ್ಬ ಪ್ರಾಮಾಣಿಕ ಅಧಿಕಾರಿ. ಅವರನ್ನು ಕೆಲಸದಿಂದ ತೆಗೆದುಹಾಕಬೇಕು ಎಂದು ಅನೇಕರು ಸೇರಿಕೊಂಡು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ
ಪತ್ರದ ಬಗ್ಗೆ ಮಾತನಾಡಿದ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮಹಾನಿರ್ದೇಶಕ ಮುತಾ ಅಶೋಕ್ ಜೈನ್ ಅವರು, ನಾನು ಪತ್ರವನ್ನು ನೋಡಿದ್ದೇನೆ. ನಾವು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.