ಕನ್ನಡ ರಾಜ್ಯೋತ್ಸವ ಹತ್ತಿರ ಬರ್ತಿದ್ದಂತೆ ಪುಂಡಾಟಿಕೆ ಶುರು – MES ವಿರುದ್ಧ ಹೆಚ್‍ಡಿಕೆ ಕಿಡಿ

Public TV
1 Min Read
HDK 2

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಪ್ರಚಾರದಲ್ಲಿ ಬ್ಯುಸಿಯಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇದೀಗ ಎಂಇಎಸ್ (MES) ವಿರುದ್ಧ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡುವ ಮೂಲಕ ಎಂಇಎಸ್ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಕನ್ನಡ ರಾಜ್ಯೋತ್ಸವ ಹತ್ತಿರ ಬರುವ ಸಂದರ್ಭದಲ್ಲಿ ಪುಂಡಾಟಿಕೆ ಶುರು ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆಯಿರಿ – ಭಾಷಾ ವಿಷಬೀಜ ಬಿತ್ತಲು MES ಯತ್ನ

ಟ್ವೀಟ್‍ನಲ್ಲೇನಿದೆ..?
ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್, ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬಸ್ಥರಿಂದ ಹಲ್ಲೆ ಪ್ರಕರಣ- ಮನೆ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ನಾನು ಸರಕಾರವನ್ನು ಒತ್ತಾಯ ಮಾಡುತ್ತೇನೆ.

Share This Article
Leave a Comment

Leave a Reply

Your email address will not be published. Required fields are marked *