ಹೈದರಾಬಾದ್: ಟಾಲಿವುಡ್ ನಟಿ ಸಮಂತಾ, ನಾಗಚೈತನ್ಯ ಜೊತೆ ಕ್ಲಿಕ್ಕಿಸಿಕೊಂಡಿದ್ದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡುವ ಮೂಲಕ ಮಾಜಿ ಪತಿಯ ನೆನಪುಗಳನ್ನು ಅಳಿಸಿ ಹಾಕಿದ್ದಾರೆ.
ಟಾಲಿವುಡ್ ಕ್ಯೂಟ್ ಪೇರ್ ಎಂದೇ ಫೇಮಸ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನಾ ಪಡೆದ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಸದ್ಯ ದಾಂಪತ್ಯ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಮರೆಯಲು ಸಮಂತಾ ಪ್ರವಾಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ರಿಷಿಕೇಷಕ್ಕೆ ಭೇಟಿ ನೀಡಿದ್ದ ಅವರು, ಇದೀಗ ದುಬೈಗೆ ಹಾರಿದ್ದಾರೆ. ಇದನ್ನೂ ಓದಿ: ‘ಪುಷ್ಪ’ ಸಾಂಗ್ ನಲ್ಲಿ ಪಡ್ಡೆ ಹೈಕ್ಳ ನಿದ್ದೆ ಕೆಡಿಸಿದ ರಶ್ಮಿಕಾ
ವಿಚ್ಛೇದನ ಬಳಿಕ ಪ್ರವಾಸ ಕೈಗೊಂಡಿರುವ ಸಮಂತಾ ತಮ್ಮ ದಿನಚರಿಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವುದರ ಜೊತೆಗೆ ವಿವಿಧ ಸಾಲುಗಳನ್ನು ಹಾಕುವ ಮೂಲಕ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಇದನ್ನೂ ಓದಿ: ವಿಚ್ಛೇದನದ ನಂತ್ರ ಚಾರ್ ಧಾಮ್ ಯಾತ್ರೆಯಲ್ಲಿ ನಟಿ ಸಮಂತಾ
ಬಹುವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಸಮಂತಾ ಹಾಗೂ ನಾಗಚೈತನ್ಯ ಸಾಕಷ್ಟು ಸಮಯ ಒಟ್ಟಿಗೆ ಕಳೆದಿದ್ದಾರೆ. ಈ ವೇಳೆ ಇಬ್ಬರು ಹಲವಾರು ರೀತಿಯ ಸಾಕಷ್ಟುಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದರು. ಇವುಗಳನ್ನು ಒಂದಷ್ಟು ಚೆಂದದ ಫೋಟೋಗಳನ್ನು ಸಮಂತಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ಆದರೆ ಇದೀಗ ನಾಗಚೈತನ್ಯಯಿಂದ ದೂರ ಇರುವ ಸಮಂತಾ ಅವರ ಜೊತೆ ಕಳೆದ ನೆನಪುಗಳನ್ನು ಮರೆಯಲು ಪ್ರಯತ್ನಿಸುತ್ತಿದ್ದು, ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಮಾಜಿ ಪತಿ ಜೊತೆಗಿರುವ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್
ವಿಶೇಷವೆಂದರೆ ಸಮಂತಾ ನಾಗಚೈತನ್ಯ ಜೊತೆಗಿರುವ ಫೋಟೋಗಳನ್ನು ಮಾತ್ರ ಡಿಲೀಟ್ ಮಾಡಿದ್ದಾರೆ. ಆದರೆ ಇಬ್ಬರು ಇನ್‍ಸ್ಟಾಗ್ರಾಮ್‍ನಲ್ಲಿ ಪರಸ್ಪರ ಫಾಲೋ ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಪಡೆದ ಬೆನ್ನಲ್ಲೇ ಆಶ್ರಮಕ್ಕೆ ಹೋಗಿದ್ದಾರಾ ಸಮಂತಾ?