ಅಪ್ಪುರನ್ನು ಪ್ರತಿ ದಿನವೂ ಆರಾಧಿಸೋಣ: ರಮ್ಯಾ

Public TV
2 Min Read
appu ramya

– ಪುನೀತ್ ಬದುಕಿದ ರೀತಿಯಲ್ಲಿ ಪ್ರತಿದಿನ ನಾವು ಬದುಕಬೇಕು

ಬೆಂಗಳೂರು: ಅಪ್ಪು ಜೊತೆಯಲ್ಲಿ ನಾನು ಕಳೆದ ಬಹಳಷ್ಟು ನೆನಪುಗಳು ಅತ್ಯಮೂಲ್ಯ ಎಂದು ಚಂದನವನದ ಮೋಹಕ ತಾರೆ ರಮ್ಯಾ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಪೋಸ್ಟ್ ಮಾಡಿದ್ದಾರೆ.

ramya appu

ಇಂದು ಅಪ್ಪು ಅಂತ್ಯಸಂಸ್ಕಾರ ಮುಗಿದಿದ್ದು, ರಮ್ಯಾ ಇನ್‍ಸ್ಟಾಗ್ರಾಮ್ ನಲ್ಲಿ, ನಾವು ಅವರಿಗೆ ಸಲ್ಲಿಸಬಹುದಾದ ಅತ್ಯುತ್ತಮ ಗೌರವವೆಂದರೆ ಅವರು ತೋರಿಸುತ್ತಿದ್ದ ದಯೆ. ಅಪ್ಪು ಜೊತೆಯಲ್ಲಿ ನಾನು ಕಳೆದ ಬಹಳಷ್ಟು ನೆನಪುಗಳು ಅತ್ಯಮೂಲ್ಯ. ನಿಮ್ಮನ್ನು ನಾವು ಎಂದೆಂದಿಗೂ ನೆನೆಯುತ್ತೇವೆ. ಈ ಕಷ್ಟದ ಸಮಯದಲ್ಲಿ ಭಗವಂತ ಅಶ್ವಿನಿ ಮತ್ತು ಕುಟುಂಬಕ್ಕೆ ಧೈರ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮನ್ನು ಅಗಲಿರುವ ಇಂತ ಉನ್ನತ ವ್ಯಕ್ತಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ನಾನು ಅವರ ಅಭಿಮಾನಿಗಳ ಜೊತೆ ಇರುವೆನು ಎಂದು ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

ಅಪ್ಪು ಅವರ ಬಗ್ಗೆ ಹಲವರು ಬರೆದ ಎಲ್ಲ ಭಾವನಾತ್ಮಕ ಸಂದೇಶಗಳನ್ನು ಓದುತ್ತಿದ್ದೇನೆ ಮತ್ತು ಅವೆಲ್ಲವೂ ಅಕ್ಷರಸಹ ನಿಜ. ಕೆಲವಂತು ನನ್ನ ಕಣ್ಣಲ್ಲಿ ನೀರು ತಂದಿತು. ಅದುವೇ ಪುನೀತ್. ಹೌದು, ಅವರೇ ಅಪ್ಪು. ಇವುಗಳನ್ನು ಓದಿದಾಗ ನನ್ನಲ್ಲಿ ಮೂಡಿದ ಕೆಲವು ಆಲೋಚನೆಗಳು ಇವು.

ಒಬ್ಬ ವ್ಯಕ್ತಿಯನ್ನು ಜೀವಂತವಾಗಿಡಲು ಉತ್ತಮ ಮಾರ್ಗ ಯಾವುದು? ನೆನಪುಗಳಲ್ಲಿ ಅಲ್ಲ, ಏಕೆಂದರೆ ಅದು ಮಾಸಿ ಹೋಗುತ್ತವೆ. ಆದರೆ ಅವರನ್ನು ಜೀವಂತವಾಗಿಡಲು ಒಂದು ಮಾರ್ಗವಿದೆ. ಅವರು ಬದುಕಿದ ರೀತಿಯಲ್ಲಿ ಪ್ರತಿದಿನ ನಾವು ಬದುಕುವುದು. ಅವರಂತೆಯೇ ನಾವು ಪ್ರೀತಿ ಹಾಗೂ ಕರುಣಾಪೂರ್ಣ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರ ಮೂಲಕ ಅವರನ್ನು ಜೀವಂತವಾಗಿ ಇಡಬೇಕು. ದಿನನಿತ್ಯ ನಾವು ಅವರ ವ್ಯಕ್ತಿತ್ವವನ್ನು ಅನುಸರಿಸುವುದರ ಮೂಲಕ ನಾವು ಅವರನ್ನು ನಮ್ಮಲ್ಲಿ ಜೀವಂತವಾಗಿ ಇಡಲು ಸಾಧ್ಯ. ಈ ರೀತಿ ನಾವು ಅವರ ಮೌಲ್ಯಗಳನ್ನು ಮುಂದುವರಿಸಬಹುದು. ನಾವೆಲ್ಲರು ಅಪ್ಪುರನ್ನು ಪ್ರತಿ ದಿನವೂ ಆರಾಧಿಸೋಣ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಯುವರತ್ನನಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಅಮೂಲ್

PUNEET RAJKUMAR

ಹಲವು ವರ್ಷಗಳ ನಂತರ ರಮ್ಯಾ ಅವರು ಕರ್ನಾಟಕಕ್ಕೆ ಅಪ್ಪು ಅಂತಿಮ ದರ್ಶನಕ್ಕೆಂದು ಬಂದಿದ್ದು, ಅವರು ನನಗೆ ಕೋ ಸ್ಟಾರ್ ಎನ್ನುವುದಕ್ಕಿಂತ ನನ್ನ ಒಳ್ಳೆಯ ಸ್ನೇಹಿತ ಎಂದು ಹೇಳಿ ಭಾವುಕರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *