ಬೆಂಗಳೂರು: ಸ್ಯಾಂಡಲ್‍ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ರೇಖಾ ಜಗದೀಶ್, ಪುತ್ರ ಸ್ನೇಹಿತ್‍ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಕಸ ಹಾಕುವ ವಿಚಾರಕ್ಕೆ ಸೌಂದರ್ಯ ಜಗದೀಶ್ ಕುಟುಂಬಕ್ಕೂ ಹಾಗೂ ಮಾಜಿ ಮೇಯರ್ ಪುತ್ರಿ ಮಂಜುಳ ಪುರುಷೋತ್ತಮ ನಡುವೆ ಗಲಾಟೆ ನಡೆದಿದ್ದು, ಮಂಜುಳ ಪುರುಷೋತ್ತಮ್ ಅವರ ಮನೆ ಕೆಲಸದಾಕೆ ಅನುರಾಧ ಹಾಗೂ ಅವರ ತಾಯಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಸೌಂದರ್ಯ ಜಗದೀಶ್ ಕುಟುಂಬಸ್ಥರು, ಬೌನ್ಸರ್ ಸೇರಿ ಹಲ್ಲೆ ಮಾಡಿರುವುದಾಗಿ ಮಂಜುಳಾ ಪುರುಷೋತ್ತಮ್ ತಿಳಿಸಿದ್ದರು. ಹೀಗಾಗಿ ಕಸ ಗಲಾಟೆ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಪತ್ನಿ ರೇಖಾ, ಪುತ್ರ ಸ್ನೇಹಿತ್‍ಗೆ ಪೊಲೀಸರಿಂದ ನೋಟಿಸ್
ಪ್ರಕರಣ ಬಳಿಕ ನಾಪತ್ತೆ ಆಗಿದ್ದ ಆರೋಪಿಗಳು ಬಳಿಕ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 46ನೇ ಸಿಟಿ ಸಿವಿಲ್ ಕೋರ್ಟ್‍ನಿಂದ ರೇಖಾ ಜಗದೀಶ್, ಸ್ನೇಹಿತ್, ಅಲ್ಲದೆ ಪ್ರಕರಣದಲ್ಲಿ ಭಾಗಿಯಾದ ಎಲ್ಲರಿಗೂ ನಿರೀಕ್ಷಣಾ ಜಾಮೀನು ದೊರೆತಿದೆ. ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್ 30 ದಿನಗಳೊಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR