ಚಾಮರಾಜನಗರ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಆಗಲುವಿಕೆ ಸಹಿಸಲಾಗದೆ ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೊಬ್ಬಳು ಬೇಸತ್ತು ಬ್ಲೇಡ್ ನಿಂದ ಕೈ ಕೊಯ್ದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರಿನ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಯಶಸ್ವಿನಿ ಎಂಬ ವಿದ್ಯಾರ್ಥಿನಿ ಅದೇ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿದ್ದಳು. ಚಿಕ್ಕಂದಿನಿಂದಿಲೂ ಅಪ್ಪುವಿನ ಅಪ್ಪಟ ಅಭಿಮಾನಿಯಾಗಿರುವ ಯಶಸ್ವಿನಿ ಅಪ್ಪು ಹಠಾತ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಖಿನ್ನತೆಗೊಳಗಾದ ಈಕೆ ಕೈ ಮೇಲೆ ಮೇಲೆ ಬ್ಲೇಡ್ ನಿಂದಲೇ ಅಪ್ಪು ಎಂದು ಬರೆದುಕೊಂಡಿದ್ದಾಳೆ. ಇದನ್ನೂ ಓದಿ: ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು
ಕರವಸ್ತ್ರ ಹಾಗು ಬಿಳಿ ಹಾಳೆ ಮೇಲೆ ತನ್ನ ರಕ್ತದಿಂದಲೇ ಐ ಲವ್ ಯು ಅಪ್ಪು ಎಂದು ಬರೆದಿದ್ದಾಳೆ. ರಕ್ತಸ್ರಾವ ದಿಂದ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು