ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ

Public TV
2 Min Read

ಹುಬ್ಬಳ್ಳಿ: ಕೇಂದ್ರ ಸರ್ಕಾರದಂತೆಯೇ ರಾಜ್ಯದಲ್ಲೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಲಾಗಿದೆ. ಬೆಲೆ ಇಳಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 2,100 ಕೋಟಿ ರೂ. ಆದಾಯ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Petrol Diesel

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿನ್ನೆ ಪೆಟ್ರೋಲ್- ಡೀಸೆಲ್ ಬೆಲೆ ಇಳಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾನು ನಿನ್ನೆಯೇ ಕೇಂದ್ರ ಹಣಕಾಸು ಸಚಿವರು ಹಾಗೂ ಗೃಹ ಸಚಿವರ ಜೊತ ಚರ್ಚೆ ಮಾಡಿದ್ದೇನೆ‌. ಎಲ್ಲ ರಾಜ್ಯಗಳು ಸಹ ಬೆಲೆ ಕಡಿಮೆ ಮಾಡಬೇಕೆಂದು ಬಯಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಹೀಗಾಗಿ ನಾವು ಸಹ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದ್ದೇವೆ. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆಯೂ ಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರ ಪೆಟ್ರೋಲ್‌ಗೆ 5 ರೂ., ಡೀಸೆಲ್‌ಗೆ 10 ರೂಪಾಯಿ ಕಡಿಮೆ ಮಾಡಿ ನಿನ್ನೆ ಅಧಿಸೂಚನೆ ಹೊರಡಿಸಿದೆ.‌ ನಾವೂ ಇಂದು ಅಧಿಸೂಚನೆ ಹೊರಡಿಸುತ್ತೇವೆ. ಸಂಜೆಯಿಂದಲೇ ಬೆಲೆ ಇಳಿಕೆ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಇಳಿಕೆ

MONEY

ಬೆಲೆ ಇಳಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 2,100 ಕೋಟಿ ರೂ. ನಷ್ಟವಾಗಲಿದೆ. ಬೆಲೆ ಇಳಿಕೆ ಮಾಡುವ ಚಿಂತನೆ ಇತ್ತು. ಇದೀಗ ಕೇಂದ್ರ ಸರ್ಕಾರ ದೇಶದ ಜನರಿಗೆ ದೀಪಾವಳಿ ಉಡುಗೊರೆ ನೀಡಿರುವುದು ಖುಷಿ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ – ವಾಹನ ಸವಾರರ ಮಿಶ್ರ ಪ್ರತಿಕ್ರಿಯೆ

ಸರ್ಕಾರ ನೂರು ದಿನಗಳಲ್ಲಿ ಬಹಳ ದೊಡ್ಡ ಮೈಲುಗಲ್ಲು ಸಾಧಿಸಲು‌ ಆಗದಿದ್ದರೂ, ಮುಂದಿನ ದಿನಕ್ಕೆ ದಿಕ್ಸೂಚಿಯಾಗಲಿದೆ. ನೂರು ದಿನದಲ್ಲಿ ಭದ್ರ, ಭರವಸೆ ಹೆಜ್ಜೆ ಇಟ್ಟಿದ್ದೇವೆ. ದಿಟ್ಟ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಅಮೃತ ಯೋಜನೆ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಬಡವರಿಗೆ ಸಂಧ್ಯಾ ಸುರಕ್ಷಾ, ಅಂಗವಿಕಲ ಹಾಗೂ ವಿಧವಾ ವೇತನ ಹೆಚ್ಚಳ ಸೇರಿದಂತೆ ಹಲವಾರು ಯೋಜನೆಗಳನ್ನು ಮಾಡಿದ್ದೇವೆ. ಇಷ್ಟಲ್ಲದೆ ಇನ್ನೂ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುವ ಚಿಂತನೆಯಿದೆ. ಆರ್ಥಿಕ ಬೆಳವಣಿಗೆ ಈಗ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

bommai

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ
ಹೈಕಮಾಂಡ್‌ನಿಂದ ದೆಹಲಿಗೆ ಬರುವಂತೆ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ನವೆಂಬರ್ 7ಕ್ಕೆ ದೆಹಲಿಗೆ ಹೋಗಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ನ.7 ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದೆ. ಆದರೆ, ನಾನು ಬೆಂಗಳೂರಿನ ಬಿಜೆಪಿ ಕಚೇರಿ ಮೂಲಕವೇ ಸಭೆಯಲ್ಲಿ ಭಾಗಿಯಾಗುತ್ತೇನೆ. ದೀಪಾವಳಿ ನಂತರ ಸಂಪುಟ ವಿಸ್ತರಣೆ ಸಂಬಂಧ ಯಾವುದೇ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *