ನ.8 ರಿಂದ ಅಂಗನವಾಡಿ ಕೇಂದ್ರಗಳು ರೀ ಓಪನ್

Public TV
1 Min Read
DANGEROUS ANGANAWADI 17

ಬೆಂಗಳೂರು: ಈಗಾಗಲೇ ಹಂತ ಹಂತವಾಗಿ ಎಲ್ಲಾ ಶಾಲಾ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಿರುವ ಸರ್ಕಾರ, ಇದೀಗ ನವೆಂಬರ್ 8 ರಿಂದ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನೂ ಆರಂಭಿಸಲು ಅನುಮತಿ ನೀಡಿ, ಈ ಸಂಬಂಧ ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ.

vlcsnap 2020 11 14 18h41m56s510 800x454 1

ಕೋವಿಡ್ ನಿಯಂತ್ರಣ ಮಾರ್ಗಸೂಚಿಯ ಎಲ್ಲ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ನ.8 ರಿಂದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿ ಮಕ್ಕಳಿಗೆ ಕಲಿಕಾ ಚಟುವಟಿಕೆ ನಡೆಸಬಹುದು. ಮೊದಲ ಹಂತದಲ್ಲಿ ಬೆಳಗ್ಗೆ 10ರಿಂದ 12ರವರೆಗೆ ಮಾತ್ರ ನಡೆಸಬೇಕು. ಕೇಂದ್ರದ ಆರಂಭಕ್ಕೂ ಮುನ್ನ ಸ್ಥಳೀಯ ಗ್ರಾಮ ಪಂಚಾಯತ್ ಗಮನಕ್ಕೆ ತರಬೇಕು, ಮಕ್ಕಳ ಹಾಜರಾತಿಗೆ ಪೋಷಕರ ಅನುಮತಿ ಪತ್ರ ಪಡೆಯಬೇಕು. ಅಂಗನವಾಡಿ ಕಾರ್ಯಕರ್ತರು, ಸಿಬ್ಬಂದಿ ಹಾಗೂ ಕೇಂದ್ರಕ್ಕೆ ಬರುವ ಮಕ್ಕಳ ಪೋಷಕರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಮಾರ್ಗಸೂಚಿ ಹೊರಡಿಸಿದೆ. ಇದನ್ನೂ ಓದಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪರಿಸರ ಸ್ನೇಹಿ ಅರಿವು ಮೂಡಿಸಿದ ಪಬ್ಲಿಕ್ ಹೀರೋ

vlcsnap 2020 11 14 18h41m47s569 800x454 1

ಮಾರ್ಗಸೂಚಿ:
ಅಂಗನವಾಡಿಗೆ ಬರುವ ಪ್ರತಿಯೊಬ್ಬರೂ ಮಾಸ್ಕ್ ಧರಿಸಿರಬೇಕು, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಅದು ಪುಟ್ಟಮಕ್ಕಳ ಕೈಗೆ ಸಿಗದಂತೆ ಸಿಬ್ಬಂದಿ ಎಚ್ಚರ ವಹಿಸಬೇಕು. ಕೈ ತೊಳೆಯಲು ಸಾಬೂನು ವ್ಯವಸ್ಥೆ ಮಾಡಬೇಕು. ಮಕ್ಕಳನ್ನು ಕನಿಷ್ಠ 1 ಮೀಟರ್ ಅಂತರದಲ್ಲಿ ಕೂರಿಸಬೇಕು. ಮಕ್ಕಳ ಸಂಖ್ಯೆ ಹೆಚ್ಚಿದ್ದರೆ ತಂಡಗಳನ್ನು ರಚಿಸಿ ಒಂದು ತಂಡ ಒಂದು ದಿನ, ಮತ್ತೊಂದು ತಂಡ ಮರುದಿನ ಬರಲು ಸೂಚಿಸಬೇಕು. ಮಕ್ಕಳು, ಸಿಬ್ಬಂದಿ ಪ್ರತಿ 30 ನಿಮಿಷಕ್ಕೊಮ್ಮೆ ಕೈತೊಳೆಯಬೇಕು. ಕೇಂದ್ರಗಳಿಗೆ ಸಾರ್ವಜನಿಕರ ಸಂದರ್ಶನ ನಿರ್ಬಂಧಿಸಬೇಕು. ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಕೋವಿಡ್ ಲಕ್ಷಣಗಳಿರುವ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದಂತೆ ಪೋಷಕರಿಗೆ ಸೂಚಿಸಬೇಕು. ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಸೂಚಿಸಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಲಂಡನ್‍ನಿಂದ ಬರೋ ಉಡುಗೊರೆಗೆ ಆಸೆಪಟ್ಟು 4.49 ಲಕ್ಷ ರೂ. ಕಳ್ಕೊಂಡ್ರು!

Share This Article
Leave a Comment

Leave a Reply

Your email address will not be published. Required fields are marked *