ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

Public TV
1 Min Read
eye 2

ದಾವಣಗೆರೆ: ದೊಡ್ಮನೆ ಹುಡುಗ, ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಂದ ಪ್ರೇರಣೆ ಪಡೆದು ಒಂದೇ ಗ್ರಾಮದ 60ಕ್ಕೂ ಹೆಚ್ಚು ಮಂದಿ ನೇತ್ರದಾನ ಮಾಡಲು ಮುಂದಾಗಿದ್ದಾರೆ.

PUNEETH RAJKUMAR 8

ದಾವಣಗೆರೆ ತಾಲೂಕಿನ ಚಟ್ಟೋಬನಹಳ್ಳಿ ತಾಂಡದಲ್ಲಿ ನೆಚ್ಚಿನ ನಟ ಅಪ್ಪುಗೆ ಗೌರವ ಸಲ್ಲಿಸಲು ಬಂಜಾರ ಸಮುದಾಯದ 60ಕ್ಕೂ ಅಧಿಕ ಯುವಕರು ನೇತ್ರದಾನ ಮಾಡಲು ನೋಂದಯಿಸಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಸಿದ್ಧತೆ

eye 1

ಪುನೀತ್ ಅಗಲಿಕೆಯಿಂದ ಒಂದು ವಾರದಿಂದ ಶೋಕ ಸಾಗರದಲ್ಲಿ ಮುಳುಗಿದ್ದ ಚಟ್ಟೋಬನಹಳ್ಳಿ ಗ್ರಾಮಸ್ಥರು, ಅವರ ಆದರ್ಶವನ್ನು ಮೈಗೂಡಿಸಿಕೊಂಡು ಅವರ ಹಾದಿಯಲ್ಲಿಯಲ್ಲಿಯೇ ನೇತ್ರದಾನ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

ಅಪ್ಪು ಅನೇಕ ಜನರಿಗೆ ಸಹಾಯ ಮಾಡಿದ್ದಲ್ಲದೇ ಕಣ್ಣು ದಾನ ಮಾಡಿದ್ದರು. ಅವರು ನೇತ್ರದಾನ ಮಾಡಿದಕ್ಕೆ ಅವರ ದಾರಿಯಲ್ಲಿಯೇ ಅವರ ಅಭಿಮಾನಿಗಳು ಕಣ್ಣನ್ನು ದಾನ ಮಾಡುವ ಮೂಲಕ ಬೇರೆಯವರಿಗೆ ಆದರ್ಶರಾಗಿದ್ದಾರೆ. ಒಟ್ಟಾರೆ ಈ ಸಾಮಾಜಿಕ ಕಾರ್ಯ ಮಾಡುವ ಮೂಲಕ ಚಟ್ಟೋಬನಹಳ್ಳಿ ತಾಂಡ ರಾಜ್ಯಕ್ಕೆ ಮಾದರಿಯಾಗಿದೆ.

Share This Article