ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Public TV
1 Min Read
weather

ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಕೇರಳದ 8 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

kerala rain 1

ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೇ ಕೊಟ್ಟಾಯಂ, ಪತ್ತನಂತಿಟ್ಟ, ಕೊಲ್ಲಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ ವಿಶ್ವವಿದ್ಯಾನಿಲಯ ಮತ್ತು ಎಂಜಿ ವಿಶ್ವವಿದ್ಯಾನಿಲಯಗಳಲ್ಲಿ ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ

Chennai rain 1 1

ವಾರಾಂತ್ಯದಿಂದ ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇನ್ನೂ ಮಳೆಯಿಂದಾಗಿ ರಾಜ್ಯದ ಹಲವೆಡೆ ಜಲಾವೃತವಾಗಿದ್ದು, ಕೇರಳದ ಅಪ್ಪರ್ ಕುಟ್ಟನಾಡ್‍ನ ಹಲವಾರು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ಇದನ್ನೂ ಓದಿ:  ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

ನಿರಂತರ ಮಳೆಯಿಂದಾಗಿ ಈಗಾಗಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *