ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕ ಅರೆಸ್ಟ್

Public TV
1 Min Read
police web 4

ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ ಕ್ರಮಕೈಗೊಳ್ಳದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನೂ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ಕಾನೂನಿನಡಿಯಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಯುವರತ್ನನಿಗೆ ಪದ್ಮಶ್ರೀ ನೀಡಲು ಶಿಫಾರಸ್ಸಿಗೆ ತೀರ್ಮಾನ

rape web

ಈ ಕೃತ್ಯದಲ್ಲಿ ಇನ್ನಿಬ್ಬರು ಭಾಗಿಯಾಗಿರುವ ಬಗ್ಗೆ ಕೈಬರಹದ ಟಿಪ್ಪಣಿಯನ್ನು ಪರಿಶೀಲಿಸಿದಾಗ ಪೊಲೀಸರಿಗೆ ತಿಳಿದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಈ ವರ್ಷದ ಮೊದಲಾರ್ಧದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವಂತೆ ತೋರುತ್ತಿದೆ. ಶಿಕ್ಷಕರ ವಾಟ್ಸಾಪ್ ಚಾಟ್‍ನ ಆಡಿಯೊ ಸಂಭಾಷಣೆ ವೈರಲ್ ಆದ ಬಳಿಕ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

police

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಈ ಕುರಿತು ಹೇಳಿಕೆ ನೀಡಿದ್ದು, ಕೆಲವರ ವಿಕೃತಿಯು ವಿದ್ಯಾರ್ಥಿಯ ಜೀವನವನ್ನು ಕಸಿದುಕೊಂಡಿದೆ. ಶಾಲೆಗಳಲ್ಲಿ ಲೈಂಗಿಕ ಕಿರುಕುಳವಾಗದಂತೆ ನೋಡಿಕೊಳ್ಳಬೇಕು. ನಾವು ಅಪರಾಧಿಗಳನ್ನು ಕಾನೂನಿನ ಮುಂದೆ ಹಾಜರುಪಡಿಸುತ್ತೇವೆ ಮತ್ತು ಮಹಿಳೆಯರ ಸುರಕ್ಷತೆಯನ್ನು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಕೋವಿಡ್ ಲಸಿಕೆಯ ಡಬಲ್ ಡೋಸ್‍ನಿಂದ 1 ವರ್ಷಕ್ಕಿಂತ ಹೆಚ್ಚಿನ ಸುರಕ್ಷೆ

ಇತ್ತೀಚೆಗಷ್ಟೇ, ಚೆನ್ನೈನ ಕೆಲವು ಶಾಲೆಗಳ ಶಿಕ್ಷಕರನ್ನು ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಆಡಳಿತ ಮಂಡಳಿಯ ಹಿರಿಯ ಸದಸ್ಯರಿಗೆ ಲೈಂಗಿಕ ಕಿರುಕುಳದ ಬಗ್ಗೆ ಮಾಹಿತಿ ಇದ್ದರೂ ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *