ಬಿಟ್‍ಕಾಯಿನ್ ಹಗರಣ – ರಾಕೇಶ್ ಸಿದ್ದರಾಮಯ್ಯ ಹೆಸರು ಎಳೆದು ತಂದ ಬಿಜೆಪಿ

Public TV
2 Min Read
RAKESH SIDDRAMIHA

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್‍ಕಾಯಿನ್ ಪ್ರಕರಣಕ್ಕೆ ಸಂಬಂಧಿದಂತೆ ಬಿಜೆಪಿ 3 ವರ್ಷದ ಹಿಂದೆ ಮೃತಪಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಗ ರಾಕೇಶ್ ಸಿದ್ದರಾಮಯ್ಯರ ಹೆಸರು ಎಳೆದು ತಂದು ಟ್ವಿಟ್ಟರ್‍ ನಲ್ಲಿ ಫೋಟೋ ಸಮೇತ ಟ್ವೀಟ್ ಮಾಡಿದೆ.

RAKESH SIDDRAMAIHA

ಟ್ವೀಟ್‍ನಲ್ಲಿ ಏನಿದೆ?:
ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಆದರೆ ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಕನನ್ನಾಗಿ ಮಾಡಿದೆಯೇ? ಬಿಟ್ ಕಾಯಿನ್ ಪ್ರಭಾ ವಲಯ ನಿಮ್ಮನ್ನೇ ಸುತ್ತಿಕೊಳ್ಳಬಹುದೆಂಬ ಭಯ ಕಾಡುತ್ತಿದೆಯೇ? ಮಾನ್ಯ ಬುರುಡೆರಾಮಯ್ಯ, ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು. ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಇದನ್ನೂ ಓದಿ: ಬಿಟ್‍ಕಾಯಿನ್ ಹಗರಣ ಮುಚ್ಚಿಹಾಕೋದು ಅದ್ಕಿಂತ ದೊಡ್ಡ ಸ್ಕ್ಯಾಮ್: ರಾಹುಲ್ ಗಾಂಧಿ

RAKESH SIDDRAMIHA 1

ಸತ್ಯ ಅನಾವರಣವಾಗುವ ಭಯಕ್ಕೆ ನೀವು ಯೂಟರ್ನ್ ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ? ಮಾನ್ಯ ಸಿದ್ದರಾಮಯ್ಯನವರೇ, ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್‍ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು. ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂ ಬಹುದಲ್ಲವೇ!? ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ. ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು.

ಈ ಚಿತ್ರದಲ್ಲಿರುವ ಸುನೀಶ್ ಹೆಗ್ಡೆ & ಹೇಮಂತ್ ಜೊತೆಗಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ. ಆ ನಂಬಿಕೆ ನಿಜವೇ ಆದರೆ ಬಿಟ್‍ಕಾಯಿನ್ ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲೇ ಆರಂಭವಾಗಿತ್ತು. ಸಿದ್ದರಾಮಯ್ಯನವರೇ, ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ? ಬಿಟ್ ಕಾಯಿನ್ ಹ್ಯಾಕರ್ ಶ್ರೀಕಿ ಜೊತೆಗೆ ಹೇಮಂತ್ ಮುದ್ದಪ್ಪ ಹಾಗೂ ಸುನೀಶ್ ಹೆಗ್ಡೆ ಗಾಢ ಸ್ನೇಹ ಹೊಂದಿದ್ದರು. ಶ್ರೀಕಿ ಮೂಲಕ ಗೇಮಿಂಗ್ ಸೈಟ್ & ಇ-ಪೋರ್ಟಲ್ ಹ್ಯಾಕ್ ಮಾಡಿಸಿದ್ದರು ಎಂಬುದು ಪೊಲೀಸ್ ದಾಖಲೆಯಲ್ಲಿದೆ!? ಇಲ್ಲಿ ನೋಡಿ, ಸುನೀಶ್ ಹೆಗ್ಡೆ & ಹೇಮಂತ್ ಯಾರ ಜೊತೆಗಿದ್ದಾರೆ ಎಂದು ಒಮ್ಮೆ ನೋಡಿ. ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್‍ಕಾಯಿನ್ ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಇದನ್ನೂ ಓದಿ: ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ

Share This Article
Leave a Comment

Leave a Reply

Your email address will not be published. Required fields are marked *