ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವ ಬೆಂಗಳೂರು ನಗರ ಸೇರಿದಂತೆ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಮುಂಜಾಗ್ರತೆ ಕ್ರಮಗಳೊಂದಿಗೆ ಅಲರ್ಟ್ ಆಗಿರುವಂತೆ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಖಾಕಿಯಿಂದಲೇ ನ್ಯಾಯಾಧೀಶರ ಮೇಲೆ ಹಲ್ಲೆ- ಇಬ್ಬರು ಪೊಲೀಸರು ಅರೆಸ್ಟ್!
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ತುಂತುರು ಮಳೆಯಾಗುತ್ತಿದೆ. ತುಂತುರು ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳು, ನಿತ್ಯ ಕೆಲಸಕ್ಕೆ ಹೋಗುವವರಿಗೆ ಸಮಸ್ಯೆ ಆಗಲಿದೆ. ಮುಂದಿನ ನಾಲ್ಕು ದಿನದವರೆಗೂ ಮಳೆ ಇರಲಿದೆ. ಚೆನ್ನೈನಲ್ಲಿ ರೆಡ್ ಅಲರ್ಟ್ ಇರುವ ಕಾರಣ ಬೆಂಗಳೂರಿನಲ್ಲೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ವೀರ್ ದಾಸ್‍ಗೆ ಪ್ರದರ್ಶನ ನೀಡಲು ಬಿಡುವುದಿಲ್ಲ: ನರೋತ್ತಮ್ ಮಿಶ್ರಾ
ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ನೀಡಿದೆ. ವ್ಯಾಪಕ ಮಳೆ ಜೊತೆಗೆ ವಿಪರೀತ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕರಾವಳಿ ಕರ್ನಾಟಕದಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ.
ಯಾವ್ಯಾವ ಜಿಲ್ಲೆಗಳಿಗೆ ಸೂಚನೆ?
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ತಿಳಿಸಲಾಗಿದೆ.