ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಮಾನ್ಯತೆಗೆ 110 ದೇಶಗಳ ಒಪ್ಪಿಗೆ

Public TV
2 Min Read
Vaccine

ನವದೆಹಲಿ: ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳಿಗೆ ವಿದೇಶಕ್ಕೆ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಭಾರತದ ಕೋವಿಡ್-19 ಲಸಿಕಾ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಹಾಗಾಗಿ ಈ ದೇಶಗಳ ಪ್ರಯಾಣ ಸುಲಭವಾಗಲಿದೆ.

Covishield

ವಿಶ್ವ ಆರೋಗ್ಯ ಸಂಸ್ಥೆ (WHO) ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿದ ಬಳಿಕ ಭಾರತ ಸಹಿತ ಹಲವು ದೇಶಗಳಲ್ಲಿ ಸಾವಿರಾರು ಕೋಟಿ ಜನ ಲಸಿಕೆ ಪಡೆದುಕೊಂಡಿದ್ದರು. ಜೊತೆಗೆ ವಿಶ್ವದ ಹಲವು ದೇಶಗಳೊಂದಿಗೆ ಕೇಂದ್ರ ಸರ್ಕಾರ ಉತ್ತಮ ಬಾಂಧವ್ಯ ಹೊಂದಿದೆ ಹಾಗಾಗಿ ನಮ್ಮ ದೇಶದಿಂದ ಆಸ್ಟ್ರೇಲಿಯಾ, ರಷ್ಯಾ, ಅಮೆರಿಕ, ಜರ್ಮನಿ ಸಹಿತ 110 ದೇಶಗಳಿಗೆ ಪ್ರಯಾಣಿಸಲು ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಮಾನ್ಯತೆ ಪಡೆದುಕೊಂಡಿದೆ. ಇದರಿಂದಾಗಿ ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳ ಪ್ರಯಾಣ ಸುಲಭವಾಗಲಿದೆ. ಇದನ್ನೂ ಓದಿ: ನಾನು ಭಾರತದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದೇನೆ: ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್

Vaccine 1 1

WHO ಅನುಮೋದನೆ ನೀಡಿರುವ ಕೋವಿಡ್-19 ಲಸಿಕೆ ಪಡೆದ ಪ್ರಯಾಣಿಕರು ಪ್ರಯಾಣಿಸುವ ವೇಳೆ ಕೋವಿಡ್ ಲಸಿಕೆ ಪ್ರಮಾಣ ಪತ್ರ ಪಡೆದಿರುವುದು ಮುಖ್ಯ. ಇದೀಗ ಭಾರತದ ಕೋವಿಶೀಲ್ಡ್ ಪಡೆದ ಭಾರತೀಯ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹಾಗಾಗಿ ಈ ದೇಶಗಳಿಗೆ ಪ್ರಯಾಣಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. 110 ದೇಶಗಳು ಲಸಿಕೆ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ ಒಪ್ಪಿಕೊಂಡಿವೆ ಮತ್ತು ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆ ಕುರಿತು ಭಾರತದೊಂದಿಗೆ ಒಪ್ಪಂದವನ್ನು ಹೊಂದಿರುವ ಅನೇಕ ದೇಶಗಳಿವೆ. ಅದೇ ರೀತಿಯಲ್ಲಿ ಭಾರತದೊಂದಿಗೆ ಅಂತಹ ಒಪ್ಪಂದ ಹೊಂದಿಲ್ಲದ ರಾಷ್ಟ್ರಗಳು ಕೂಡಾ ಇವೆ. ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ಲಸಿಕೆ ಹಾಕಿಸಿಕೊಂಡ ಭಾರತೀಯ ನಾಗರಿಕರಿಗೆ ವಿನಾಯಿತಿ ಸಿಗುತ್ತಿದೆ. ಇದರಿಂದ ಭಾರತೀಯರ ಅಂತರಾಷ್ಟ್ರೀಯ ಪ್ರಯಾಣ ಸಲಿಸಾಗಿದೆ. ಇದನ್ನೂ ಓದಿ: ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್‌, ಪೆಟ್ರೋಲ್‌ ಇಲ್ಲ

 ಭಾರತದ ವ್ಯಾಕ್ಸಿನ್ ಸಾಧನೆ
ಭಾರತ ಈವರೆಗೆ 100ಕ್ಕೂ ಹೆಚ್ಚು ದೇಶಗಳಿಗೆ 66 ಮಿಲಿಯನ್(6 ಕೋಟಿ)ಗೂ ಹೆಚ್ಚು, ವ್ಯಾಕ್ಸಿನ್ ಡೋಸ್‍ಗಳನ್ನು ರಫ್ತು ಮಾಡಿದೆ. ವಾಣಿಜ್ಯ ಸಾಗಣೆ ಹಾಗೂ ಕೋವ್ಯಾಕ್ಸ್ ಸೌಲಭ್ಯದ ಮೂಲಕ ರಫ್ತು ಮಾಡಿದೆ. ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್ ಅವರ ತವರು ದೇಶ ಮಾಲ್ಡೀವ್ಸ್. ಭಾರತದ ಲಸಿಕೆಯನ್ನು ಪಡೆದ ಮೊದಲ ದೇಶಗಳಲ್ಲಿ ಮಾಲ್ಡೀವ್ಸ್ ಕೂಡ ಒಂದು. 1 ಲಕ್ಷ ಡೋಸ್‍ಗಳನ್ನು ಆರಂಭದಲ್ಲಿ ಕಳುಹಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *