ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವ ಕುರಿತಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ತಿಳಿಸಿದ್ದಾರೆ. ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.
ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ @BJP4India ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ.
ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ. 5/5#ಜೈಕಿಸಾನ್
— Siddaramaiah (@siddaramaiah) November 19, 2021
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ
ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ @BJP4India ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು.
ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. 4/5#ಜೈಕಿಸಾನ್
— Siddaramaiah (@siddaramaiah) November 19, 2021
ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ