ನವದೆಹಲಿ: ಕೇಂದ್ರ ಸರ್ಕಾರ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವುದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಹೇಳಿದ್ದಾರೆ.
ದೆಹಲಿಯಲ್ಲಿ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ಅವರು, ಗಾಂಧಿಯ ಶಾಂತಿಯ ತತ್ವ ಮತ್ತೊಮ್ಮೆ ಸಾಬೀತಾಗಿದೆ. ಶಾಂತಿಯುತ ಹೋರಾಟದಿಂದ ಎಲ್ಲವನ್ನೂ ಗೆಲ್ಲಬಹುದಾಗಿದೆ, ಅನ್ನದಾತರು ಇದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್
अब तक काले कृषि कानूनों के
फायदे बताने वाले सरकारी पत्रकार,
अब कृषि कानून वापस होने के फायदे बतायेंगे..
— Srinivas BV (@srinivasiyc) November 19, 2021
ನೂರಾರು ರೈತರು ಹುತಾತ್ಮರಾದರೂ ಅನ್ನದಾತರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಬಿಜೆಪಿ ತೆಗೆದುಕೊಂಡಿದೆ. ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆತಂರಿಕ ವರದಿಯಲ್ಲಿ ನೆಗೆಟಿವ್ ರಿಪೋರ್ಟ್ ಬಂದಿದೆ. ಇದಕ್ಕೆ ಬೆದರಿರುವ ಮೋದಿ ಸರ್ಕಾರ ಕಾನೂನು ವಾಪಸ್ ಪಡೆದಿದೆ. ಇದು ರೈತರ ಹೋರಾಟಕ್ಕೆ ಸಂದ ಅತಿದೊಡ್ಡ ಜಯವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ