Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

Bengaluru City

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

Public TV
Last updated: November 20, 2021 7:42 am
Public TV
Share
2 Min Read
RAIN 4 2
SHARE

ಬೆಂಗಳೂರು: ರಾಜ್ಯಾದ್ಯಂತ ಮಳೆಯಬ್ಬರ ಮುಂದುವರಿದಿದೆ. ರಣಮಳೆಗೆ ಮಧ್ಯ ಕರ್ನಾಟಕ ಮುಳುಗಿದೆ. ಇನ್ನು ದಕ್ಷಿಣ, ಮಧ್ಯಕರ್ನಾಟಕದಲ್ಲಿ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದ್ದು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬೊಬ್ಬಿರಿಯುತ್ತಿದ್ದಾನೆ. ರಾಜ್ಯಾದ್ಯಂತ ಮಹಾಮಳೆಗೆ ಈವರೆಗೆ 6 ಮಂದಿ ಬಲಿಯಾಗಿದ್ದಾರೆ.

RAIN 3 3

ಬರದನಾಡು ಚಿಕ್ಕಬಳ್ಳಾಪುರದಲ್ಲಿ ಕಂಡು ಕೇಳರಿಯದ ಮಳೆಯಾಗ್ತಿದೆ. ಪರಿಣಾಮ ಗೌರಿಬಿದನೂರಿನಲ್ಲಿ ಉತ್ತರ ಪಿನಾಕಿನಿ ನದಿ ಮೈದುಂಬಿ ಹರಿಯುತ್ತಿದ್ದು, ನದಿಯ ಅಕ್ಕಪಕ್ಕದಲ್ಲಿ ವಾಸಿಸುತ್ತಿರುವ ಸಾವಿರಾರು ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರನ್ನು ತಾಲೂಕು ಆಡಳಿತ, ನಗರಸಭೆ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪಗಳಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಡಿಎ ಅಧಿಕಾರಿಗಳಿಗೆ ಎಸಿಬಿ ಶಾಕ್‌- ಕಂತೆ ಕಂತೆ ನೋಟು, ಬ್ಯಾಗ್‌ಗಟ್ಟಲೆ ದಾಖಲೆಗಳು ವಶ!

RAIN 6 1

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮಂಚೇನಹಳ್ಳಿ ಬಳಿ ಉತ್ತರಪಿನಾಕಿನ ನದಿಯ ಭೋರ್ಗೆರೆತ ಜೋರಾಗಿದ್ದು, ಮಂಚೇನಹಳ್ಳಿ-ತೊಂಡೆಬಾವಿ ಮಾರ್ಗ ಮಧ್ಯೆ ಇರುವ ಸೇತುವೆ ತಳಪಾಯ ಕೊಚ್ಚಿ ಹೋಗಿದೆ. ಸೇತುವೆ ಮೇಲೆ ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ.

RAIN 10

ವರುಣನ ಅರ್ಭಟಕ್ಕೆ ಕೋಲಾರ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಕೋಲಾರ ನಗರ, ಬಂಗಾರಪೇಟೆ, ಶ್ರೀನಿವಾಸಪುರ ಪಟ್ಟಣ, ಗೌನಿಪಲ್ಲಿ, ಕೆಜಿಎಫ್ ನಗರದಲ್ಲಿ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಇಬ್ಬರು ಮೃತಪಟ್ಟಿದ್ದಾರೆ. 9 ಮನೆಗಳು ಬಿದ್ದಿದೆ. 306 ಮನೆಗಳು ಭಾಗಶಃ ಹಾನಿಯಾಗಿವೆ. ಬಿಜಿಎಸ್ ಶಾಲೆಯೂ ಮುಳುಗಡೆಯಾಗಿದೆ. ಇನ್ನು ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಜಿಲ್ಲೆಯ ಶೇ.98ರಷ್ಟು ಕೆರೆಗಳು ತುಂಬಿ ಕೋಡಿ ಹರಿದಿವೆ.

RAIN 7 1

ನಿರಂತರ ಮಳೆಯಿಂದ ಕೊಡಗಿನ ಹಲವೆಡೆ ಭತ್ತ, ಜೋಳದ ಬೆಳೆ ನಾಶವಾಗಿದೆ. ಗದ್ದೆಗಳಲ್ಲಿ ನೀರು ನಿಂತು ಭತ್ತದ ಬೆಳೆ ಕೊಳೆಯುತ್ತಿದೆ. ಇನ್ನು ಕುಶಾಲನಗರ ತಾಲ್ಲೂಕು ಒಂದರಲ್ಲೇ ಬರೋಬ್ಬರಿ 800 ಎಕರೆಯಷ್ಟು ಮೆಕ್ಕೆಜೋಳ ನಷ್ಟವಾಗಿದೆ. ಸತತ ಮಳೆಯಿಂದ ಮೆಕ್ಕೆಜೋಳ ಗಿಡದಲ್ಲೇ ಮೊಳಕೆ ಒಡೆಯುತ್ತಿದೆ. ಇದರಿಂದಾಗಿ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ದಾವಣಗೆರೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹರಿಹರ ತಾಲೂಕಿನಲ್ಲಿ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಇನ್ನೇನು ಎರಡು ದಿನಗಳಲ್ಲಿ ಕಟಾವು ಮಾಡಿ ಮಾರುಕಟ್ಟೆ ಹಾಕಬೇಕು ಅಂತಿದ್ದ ಅನ್ನದಾತರು ಕಂಗಾಲಾಗಿದ್ದಾರೆ. ಆದಾಪುರ, ಜಿಗಳಿ, ಮಲೆಬೆನ್ನೂರಿನಲ್ಲೂ ಸಾವಿರಾರು ಎಕರೆ ಭತ್ತ ಸಂಪೂರ್ಣ ನೆಲ ಕಚ್ಚಿದೆ.

RAIN 5 1

ದಾವಣಗೆರೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ನಿನ್ನೇ ರಾತ್ರಿಯಿಂದ ಬಿಡದೆ ಬರುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಸಂಪೂರ್ಣ ಭರ್ತಿಯಾಗಿದೆ. ಚನ್ನಗಿರಿ ತಾಲೂಕಿನ ಗೋಪೇನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದೆ. ಮಾವಿನಹಳ್ಳಿ ಕೆರೆ ಭರ್ತಿಯಾಗಿ ಕೋಡಿಬಿದ್ದಿದೆ. ಜೋಳದಾಳ್ ಅಮ್ಮನಗುಡ್ಡದ ಕಲ್ಲು ಕಟ್ಟುವ ಚೌಡೇಶ್ವರಿ ದೇವಾಲಯ ಮುಳುಗಡೆಯಾಗಿದೆ. ಹರಿದ್ರಾವತಿ ಹಳ್ಳ ತುಂಬಿ ಹರಿದು ಚನ್ನಗಿರಿ ತಾಲ್ಲೂಕಿನ ಬುಳಸಾಗರ ಗ್ರಾಮದಲ್ಲಿರೋ ಸಿದ್ದರಾಮೇಶ್ವರ ರಂಗನಾಥಸ್ವಾಮಿ, ಆಂಜನೇಯ ಸ್ವಾಮಿ ದೇವಾಲಯಗಳಿಗೆ ನೀರು ನುಗ್ಗಿದೆ. ರೈಲ್ವೇ ಅಂಡರ್‍ಪಾಸ್ ಮುಳುಗಡೆಯಾಗಿದೆ.

RAIN 11

ಅಕಾಲಿಕ ಮಳೆಯಿಂದ ಕೊಪ್ಪಳ ಜಿಲ್ಲಾದ್ಯಂತ ಸಾಕಷ್ಟು ಬೆಳೆ ಹಾನಿಯಾಗಿದೆ. ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ ಕಟಾವಿಗೆ ಬಂದಿದ್ದ ಭತ್ತ ಸಂಪೂರ್ಣವಾಗಿ ನೆಲ ಕಚ್ಚಿದೆ. ಕೊಯ್ಲಿಗೆ ಬಂದಿದ್ದ ಭತ್ತ ನೆಲಕ್ಕೆ ಬಿದ್ದು, ನೀರು ಪಾಲಾಗಿದೆ. ಇನ್ನು ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು ಜಲಾಶಯದಿಂದ ಅಪಾರ ಪ್ರಮಾಣ ನೀರನ್ನು ನದಿಗೆ ಬಿಡುಗಡೆ ಮಾಡಲಾಗ್ತಿದ್ದು ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

TAGGED:bengalurukarnatakarainಕರ್ನಾಟಕಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
4 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
5 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
5 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
7 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
7 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?