ತಿರುವನಂತಪುರಂ: ಭಾರೀ ಮಳೆಯ ಹಿನ್ನೆಲೆ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಶಬರಿಮಲೆ ದೇಗುಲವನ್ನು ಇಂದು ಮುಚ್ಚುವುದಾಗಿ ಜಿಲ್ಲಾಡಳಿತ ಶುಕ್ರವಾರ ಆದೇಶ ಹೊರಡಿಸಿದೆ.
ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಿರಂತರ ಮಳೆ ಮತ್ತು ಪಂಪಾ ನದಿ ಸೇರಿದಂತೆ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯ ಸಲುವಾಗಿ ಇಂದು(ನವೆಂಬರ್ 20) ಪಂಪ ಮತ್ತು ಶಬರಿಮಲೆ ದೇಗುಲಕ್ಕೆ ಯಾತ್ರೆಯನ್ನು ನಿಷೇಧಿಸಲಾಗಿದೆ. ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ ಶನಿವಾರದ ಯಾತ್ರೆಯನ್ನು ನಿಷೇಧಿಸಿ ಜಿಲ್ಲಾಡಳಿತ ಶುಕ್ರವಾರ ಆದೇಶವನ್ನು ಹೊರಡಿಸಿದೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವವರೆಗೂ ರಾಜ್ಯ ವಿಧಾನಸಭೆಗೆ ಕಾಲಿಡಲ್ಲ: ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ
ಪತ್ತನಂತಿಟ್ಟ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಪಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಕಕ್ಕಿ-ಆನಾತೋಡ್ ಜಲಾಶಯ ಮತ್ತು ಪಂಪಾ ಅಣೆಕಟ್ಟುಗಳಲ್ಲಿ ರೆಡ್ ಅಲರ್ಟ್ ಫೋಷಣೆಯಾದ ಹಿನ್ನೆಲೆ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಇಂದು ಪಂಪಾ ಮತ್ತು ಶಬರಿಮಲೆಗೆ ಯಾತ್ರೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ಅವರು ಆದೇಶ ಹೊರಡಿಸಿದ್ದಾರೆ.
ವರ್ಚುವಲ್ ಕ್ಯೂ ಸಿಸ್ಟಮ್ ಮೂಲಕ ಸ್ಲಾಟ್ ಕಾಯ್ದಿರಿಸಿದ ಯಾತ್ರಾರ್ಥಿಗಳಿಗೆ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾದ ನಂತರ ಹತ್ತಿರದ ಸಂಭವನೀಯ ಸ್ಲಾಟ್‍ನಲ್ಲಿ ದೇವರ ‘ದರ್ಶನ’ಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಿದರು. ಈ ಸಮಯದಲ್ಲಿ ಯಾತ್ರಾರ್ಥಿಗಳು ಪ್ರಯಾಣವನ್ನು ಕೈಗೊಳ್ಳದೆ ಸಹಕರಿಸಲು ವಿನಂತಿಸಿಕೊಂಡರು. ಇದನ್ನೂ ಓದಿ: ಓಟಿಟಿ ಪ್ರವೇಶಿಸಲು ಸಿದ್ಧರಾದ ನಾಗಚೈತನ್ಯ
ಎರಡು ತಿಂಗಳ ಕಾಲ ವಾರ್ಷಿಕ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಗಾಗಿ ನವೆಂಬರ್ 16 ರಂದು ತೆರೆದಾಗಿನಿಂದ ಹವಾಮಾನ ಪರಿಸ್ಥಿತಿಗಳು ಮತ್ತು ಕೋವಿಡ್-19 ಪರಿಸ್ಥಿತಿಯನ್ನು ಎದುರಿಸಿ, ನೂರಾರು ಭಕ್ತರು ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಬರುತ್ತಿದ್ದಾರೆ. ಸಾಂಕ್ರಾಮಿಕ ಮತ್ತು ಭಾರೀ ಮಳೆಯ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳನ್ನು ನಿಯಂತ್ರಿಸಲು ಹಿಂದಿನ ವರ್ಷದಂತೆ ಈ ಬಾರಿಯೂ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.