ಆಂಧ್ರಪ್ರದೇಶಕ್ಕೆ ಅಮರಾವತಿ ರಾಜಧಾನಿ: ಜಗನ್ ಮೋಹನ್ ರೆಡ್ಡಿ

Public TV
2 Min Read
Jagan Mohan Reddy EPS

ಅಮರಾವತಿ: ರಾಜಧಾನಿಗಳ ಬಗ್ಗೆ ವಿವಾದದ ನಡೆಯುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯಕ್ಕೆ ಒಂದೇ ರಾಜಧಾನಿ ಅದು ಅಮರಾವತಿ ಎಂದು ಘೋಷಿಸಿದ್ದಾರೆ.

Jaganmohan Reddy e1570865180353

ಎಪಿ ಮರುಸಂಘಟನೆ ಕಾಯಿದೆ, 2014 ಸೆಕ್ಷನ್ 6ರ ಅಡಿಯಲ್ಲಿ ಕೇಂದ್ರ ಸರ್ಕಾರವು 2014 ಮಾರ್ಚ್28 ರಂದು ಆಂಧ್ರಪ್ರದೇಶ ರಾಜ್ಯಕ್ಕೆ ಹೊಸ ರಾಜಧಾನಿಗಾಗಿ ಪರ್ಯಾಯಗಳನ್ನು ಅಧ್ಯಯನ ಮಾಡಲು ಕೆ.ಸಿ ಶಿವರಾಮಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ಪ್ರತಿ-ಅಫಿಡವಿಟ್ ಉಲ್ಲೇಖಿಸಿದೆ. ಸಮಿತಿಯು ಅದೇ ವರ್ಷದ ಆಗಸ್ಟ್ 30 ರಂದು ತನ್ನ ವರದಿಯನ್ನು ಸಲ್ಲಿಸಿತು. ಎರಡು ದಿನಗಳ ನಂತರ ಸೆಪ್ಟೆಂಬರ್ 1 ರಂದು ಆಂಧ್ರ ಪ್ರದೇಶ ಸರ್ಕಾರಕ್ಕೆ ಕಳುಹಿಸಲಾಯಿತು. ಅಫಿಡವಿಟ್‍ನಲ್ಲಿ ರಾಜ್ಯ ಸರ್ಕಾರವು  2015 ಏಪ್ರಿಲ್ 23ರಂದು ರಾಜಧಾನಿಯನ್ನು ಅಮರಾವತಿ ಎಂದು ಸೂಚಿಸಿ ಆದೇಶವನ್ನು ಹೊರಡಿಸಿದೆ ಎಂದು ಉಲ್ಲೇಖಿಸಿದೆ. ಅದೇ ವೇಳೆ ರಾಜ್ಯದ ರಾಜಧಾನಿಯನ್ನು ಆಯಾ ರಾಜ್ಯ ಸರ್ಕಾರ ನಿರ್ಧರಿಸುತ್ತದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ:  ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

Jagan Mohan Reddy

2020 ಜುಲೈ 31 ರಂದು ರಾಜ್ಯ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಆಂಧ್ರ ಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಅಂತರ್ಗತ ಅಭಿವೃದ್ಧಿ ಕಾಯಿದೆ 2020ರ ಮೂಲಕ ಆಂಧ್ರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಮೂರು ಆಡಳಿತ ಸ್ಥಾನಗಳನ್ನು ಹೊಂದಿರಬೇಕು ಎಂದು ಎಂದು ಅಫಿಡವಿಟ್ ಉಲ್ಲೇಖಿಸಿದೆ. ಅವುಗಳನ್ನು ರಾಜಧಾನಿಗಳೆಂದು ಕರೆಯಬೇಕು. ಅಮರಾವತಿ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶವನ್ನು ಶಾಸಕ ರಾಜಧಾನಿ ಎಂದು ಕರೆಯಲಾಗುವುದು, ವಿಶಾಖಪಟ್ಟಣ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶವನ್ನು ಕಾರ್ಯನಿರ್ವಾಹಕ ರಾಜಧಾನಿ ಮತ್ತು ಕರ್ನೂಲ್ ನಗರಾಭಿವೃದ್ಧಿ ಪ್ರದೇಶವನ್ನು ನ್ಯಾಯಾಂಗ ರಾಜಧಾನಿ ಎಂದು ಕರೆಯಲಾಗುವುದು. ಆಂಧ್ರಪ್ರದೇಶದ ಬಿಜೆಪಿ ನಾಯಕ ವೈಎಸ್ ಚೌಧರಿ ಕಳೆದ ವಾರ ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿಯಾಗಿ ಘೋಷಿಸುವ ಬೇಡಿಕೆಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

ಆಂಧ್ರಪ್ರದೇಶದ ರಾಜಧಾನಿಯಾಗಿ ಅಮರಾವತಿಯನ್ನು ಬೆಂಬಲಿಸಲು ಬಿಜೆಪಿ ಪರವಾಗಿ ನಾವು ನಿರ್ಣಯವನ್ನು ಅಂಗೀಕರಿಸಿದ್ದೇವೆ. ಯಾವುದೇ ಅಧಿಕಾರವಿಲ್ಲದೇ ರಾಜ್ಯದಲ್ಲಿ ಮೂರು ರಾಜಧಾನಿಗಳು ಎಂದು ವೈಎಸ್‌ಆರ್‌ಸಿಪಿ ಸರ್ಕಾರ ಘೋಷಿಸಿತು. ರಾಜಧಾನಿ ಅಭಿವೃದ್ಧಿಗೆ ಭೂಮಿ ನೀಡಿದ ಸ್ಥಳೀಯ ರೈತರನ್ನು ಬೆಂಬಲಿಸುವ ಸಲುವಾಗಿ ಬಿಜೆಪಿ ಅವರನ್ನು ಬೆಂಬಲಿಸುತ್ತದೆ ಮತ್ತು ಅಮರಾವತಿಯೇ ರಾಜಧಾನಿಯಾಗಿ ಉಳಿಯುವಂತೆ ಮಾಡುತ್ತದೆ ಎಂದು ಚೌಧರಿ ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *