ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ರಾಜ್ಯಕ್ಕೆ ಬೇಕಾದ ಸಂಪೂರ್ಣ ನೆರವನ್ನು ಕೇಂದ್ರದಿಂದ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜಿಲ್ಲೆಯ ಪರಿಸ್ಥಿತಿ ಹಾಗೂ ಸತತ ಮಳೆಯಿಂದಾಗಿ ಉಂಟಾದ ಬೆಳೆ ನಾಶದ ಬಗ್ಗೆ ವಿಚಾರಿಸಿದ ಅವರು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಧಿಕ ಮಳೆಯಿಂದ ಉಂಟಾದ ತೊಂದರೆ ಮತ್ತು ಇಲ್ಲಿನ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಪಡೆದುಕೊಂಡಿದ್ದಾರೆ ಎಂದರು. ಇದನ್ನೂ ಓದಿ: 30 ವರ್ಷಗಳ ಬಳಿಕ ತುಂಬಿದ ಕೆರೆ – ಡ್ರೋನ್ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಇಂದು ಯಲಹಂಕದ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ವೀಕ್ಷಿಸುವುದಾಗಿ ತಿಳಿಸಿದರು. ಕಳೆದ ಮೂರು ದಿನಗಳಿಂದ ಯಲಹಂಕದಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದೆ. ಅವರ ತೊಂದರೆಗಳನ್ನು ಆಲಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿ ಮೂತ್ರ ವಿರ್ಸಜನೆ ಮಾಡಿದ್ದಕ್ಕೆ ವೃದ್ಧನಿಗೆ ಕಲ್ಲಿನಿಂದ ಹೊಡ್ದ
ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ರವರು ಇಂದು ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ನಮ್ಮ ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಮತ್ತು ಪರಿಹಾರ ಕ್ರಮಗಳ ಬಗ್ಗೆ ವಿವರ ನೀಡಲಾಯಿತು.@PMOIndia
1/2
— Basavaraj S Bommai (@BSBommai) November 23, 2021
ಕಳೆದ ಮೂರು ದಿನಗಳಿಂದ ಜಕ್ಕೂರಿನ ಜವಾಹರಲಾಲ್ ನೆಹರೂ ಸಂಸ್ಥೆಯಲ್ಲಿ ಮಳೆಯಿಂದಾಗಿ ಅಪಾರ ಹಾನಿಗಳಾಗಿದೆ. ಲ್ಯಾಬೋರೇಟರಿಗೆ ನೀರು ನುಗ್ಗಿ ಕಂಪ್ಯೂಟರ್‌ಗಳು ಹಾನಿಯಾಗಿದೆ. ಅಲ್ಲಿಗೆ ಖುದ್ದು ಸಿಎಂ ಭೇಟಿ ನೀಡಿನ ಅಲ್ಲಿನ ಪರಿಸ್ಥಿತಿಗಳನ್ನು ವೀಕ್ಷಿಸಿದರು.
ವಿಶೇಷವಾಗಿ ಜೀವಹಾನಿ ಮತ್ತು ಬೆಳೆಹಾನಿಯ ಬಗ್ಗೆ ಪ್ರಧಾನಮಂತ್ರಿಗಳು ಕಳಕಳಿ ವ್ಯಕ್ತಪಡಿಸಿ, ರಾಜ್ಯಕ್ಕೆ ಸಾಧ್ಯವಿರುವ ಸಹಕಾರ, ನೆರವು ನೀಡುವುದಾಗಿ ಭರವಸೆ ನೀಡಿದರು.
2/2
— Basavaraj S Bommai (@BSBommai) November 23, 2021
ಯಲಹಂಕ, ಜಕ್ಕೂರಿನ ನೆಹರೂ ಸಂಸ್ಥೆ, ಮಾನ್ಯತಾ ಟೆಕ್ ಪಾರ್ಕ್‍ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.