ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ 306 ಕೇಸ್ ಇದ್ದರೆ, ಇಂದು ಒಟ್ಟು 402 ಪಾಸಿಟಿವ್ ಕೇಸ್ ಪತ್ತೆಯಾಗಿದೆ. 6 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 277 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,611 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,94,963 ಮಂದಿಗೆ ಕೊರೊನಾ ಬಂದಿದೆ. 29,50,130 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.49 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.60 ರಷ್ಟಿದೆ. ಇಂದು 6 ಜಿಲ್ಲೆಗಳಾದ ಬೆಂಗಳೂರು ನಗರ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಕೊಡಗು ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!
ಇಂದು ರಾಜ್ಯದಲ್ಲಿ ಒಟ್ಟು 3,23,293 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 66,805 ಸ್ಯಾಂಪಲ್ (ಆರ್ಟಿ ಪಿಸಿಆರ್ 53,635 + 13,170 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹೋಂ ವರ್ಕ್ ಮಾಡದ ಮಗನ ಕೈ,ಕಾಲು ಕಟ್ಟಿ ಫ್ಯಾನಿಗೆ ನೇತು ಹಾಕಿದ ತಂದೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 224, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 4, ದಕ್ಷಿಣ ಕನ್ನಡ 19, ದಾವಣಗೆರೆ 0, ಧಾರವಾಡ 85, ಗದಗ 1, ಹಾಸನ 2, ಹಾವೇರಿ 0, ಕಲಬುರಗಿ 0, ಕೊಡಗು 2, ಕೋಲಾರ 3, ಕೊಪ್ಪಳ 0, ಮಂಡ್ಯ 1, ಮೈಸೂರು 25, ರಾಯಚೂರು 0, ರಾಮನಗರ 1, ಶಿವಮೊಗ್ಗ 3, ತುಮಕೂರು 5, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.