‘ಜೈ ಶ್ರೀ ರಾಮ್’ ಹೇಳುವಂತೆ ಒತ್ತಾಯಿಸಿ ಕಾಶ್ಮೀರದ ವ್ಯಾಪಾರಿಗಳ ಮೇಲೆ ಹಲ್ಲೆ

Public TV
2 Min Read
police

ರಾಂಚಿ: ಕಾಶ್ಮೀರದ ವ್ಯಾಪಾರಿಗಳನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿರುವ ಪ್ರಕರಣ ಜಾರ್ಖಂಡ್ ನಲ್ಲಿ ದಾಖಲಾಗಿದೆ.

ರಾಂಚಿಯಲ್ಲಿ ಕಾಶ್ಮೀರಿ ವ್ಯಾಪಾರಿಗಳಿಗೆ ‘ಜೈ ಶ್ರೀ ರಾಮ್’ ಮತ್ತು ‘ಪಾಕಿಸ್ತಾನ್ ಮುರ್ದಾಬಾದ್’ ಎಂದು ಹೇಳುವಂತೆ ಒತ್ತಾಯಿಸಿದ ಮೂವರನ್ನು ಬಂಧಿಸಿರುವುದಾಗಿ ಜಾರ್ಖಂಡ್ ಪೊಲೀಸರು ಇಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ಬ್ಲ್ಯಾಕ್‍ಮೇಲ್ – ನಕಲಿ ಎಸಿಬಿ ಅಧಿಕಾರಿ ಅರೆಸ್ಟ್

ನಡೆದಿದ್ದೇನು?
ಚಳಿಗಾಲದ ಬಟ್ಟೆಗಳನ್ನು ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹಲ್ಲೆಗೊಳಗಾದ ವ್ಯಕ್ತಿಯೊಬ್ಬ ಶನಿವಾರ ಪೊಲೀಸರಿಗೆ ದೂರ ನೀಡಿದ್ದಾರೆ. ಈ ದೂರಿನಲ್ಲಿ ರಾಂಚಿಯ ಡೊರಾಂಡಾ ಪ್ರದೇಶದಲ್ಲಿ ನನ್ನ ಮತ್ತು ಇತರ ಕೆಲವು ಕಾಶ್ಮೀರಿ ವ್ಯಾಪರಿಗಳ ಮೇಲೆ 25 ಜನರು ದಾಳಿ ಮಾಡಿದ್ದು, ಜೈ ಶ್ರೀ ರಾಮ್ ಮತ್ತು ಪಾಕಿಸ್ತಾನ ಮುರ್ದಾಬಾದ್ ಎಂದು ಹೇಳುವಂತೆ ಒತ್ತಾಯಿಸಿದರು ಎಂದು ದಾಖಲಿಸಿದ್ದಾರೆ.

ಕಾಶ್ಮೀರಿ ವ್ಯಾಪಾರಿಗಳು ಘಟನೆಯ ಬಗ್ಗೆ ದೂರು ನೀಡಿರುವ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ನಾವು ಕಾಶ್ಮೀರಿಯಾಗಿರುವುದು ಅಪರಾಧವೇ? ನಾವು ಭಾರತೀಯರಲ್ಲವೇ? ಇವರು ನಮ್ಮ ಜೀವನವನ್ನು ನರಕವಾಗಿಸಿದ್ದು, ಯಾವಾಗಲೂ ‘ಜೈ ಶ್ರೀ ರಾಮ್’, ‘ಪಾಕಿಸ್ತಾನ ಮುರ್ದಾಬಾದ್’ ಎಂದು ಹೇಳುವಂತೆ ಒತ್ತಾಯಿಸುತ್ತಿರುತ್ತಾರೆ. ಅವರು ಹೇಳಿದಂತೆ ನಾವು ಕೇಳಲಿಲ್ಲವೆಂದು ನಮ್ಮ ನಾಲ್ವರನ್ನು ಥಳಿಸಿದ್ದಾರೆ. ನಾವು ಭಾರತೀಯರು ಮತ್ತು ಕಾನೂನು ಎಲ್ಲರಿಗೂ ಸಮಾನವಾಗಿದೆ. ಕಾನೂನಿನಲ್ಲಿ ಯಾವುದೇ ತಾರತಮ್ಯ ಇರಬಾರದು ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಸಿಎಂ ಹೇಮಂತ್ ಸೊರೆನ್ ಅವರು ಆ ವೀಡಿಯೋವನ್ನು ರೀ-ಟ್ವೀಟ್ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆಯನ್ನು ನೀಡಿದರು. ಜಾರ್ಖಂಡ್‍ನಲ್ಲಿ ಧಾರ್ಮಿಕ ದ್ವೇಷ ಮತ್ತು ತಾರತಮ್ಯಕ್ಕೆ ಯಾವುದೇ ಸ್ಥಳವಿಲ್ಲ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀ ಕ್ಷೇತ್ರ ಕೈವಾರದಲ್ಲೊಂದು ಅಪರೂಪದ ಮದುವೆ

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೇಂದ್ರ ಕುಮಾರ್ ಝಾ ಈ ಕುರಿತು ಪ್ರತಿಕ್ರಿಯಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಲಾಗುತ್ತೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *