ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿ.27 ರಂದು ಚುನಾವಣೆ ಘೋಷಣೆ ಮಾಡಲಾಗಿದೆ.
ವಿವಿಧ ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಈಗಾಗಲೇ ವೇಳಾ ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ವದಂತಿ ಹಬ್ಬಿಸಿದ್ರೆ ಕಠಿಣ ಕ್ರಮ: ಡಾ. ಕೆ. ಸುಧಾಕರ್
ಡಿ.27 ರಂದು ಮತದಾನ, ಡಿಸೆಂಬರ್ 30 ರಂದು ಮತ ಎಣಿಕೆ, ಡಿಸೆಂಬರ್ 8ರಿಂದ ಅಧಿಸೂಚನೆ ಪ್ರಕಟ, ಡಿಸೆಂಬರ್ 15 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ, ಡಿಸೆಂಬರ್ 18 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನಾಂಕ ಎಂದು ಈಗಾಗಲೇ ಚುನಾವಣೆಯ ವೇಳಾ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ನೀಡಿದೆ.