Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ

Bagalkot

ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ

Public TV
Last updated: November 29, 2021 3:11 pm
Public TV
Share
2 Min Read
MURUGESH NIRANI 2
SHARE

– ಈಶ್ವರಪ್ಪನವರ ಅಭಿಮಾನಕ್ಕೆ ನಾನು ಋಣಿ
– ಬಿಜೆಪಿಯನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವುದೇ ಗುರಿ
– ಕನಿಷ್ಟ 120 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಹೆಗ್ಗುರಿ
– ನೀಡಿರುವ ಇಲಾಖೆಯಲ್ಲೇ ನಾನು ಸಂತೃಪ್ತಿ

ಬಾಗಲಕೋಟೆ: ನನ್ನ ಮೇಲೆ ಪ್ರೀತಿ, ವಿಶ್ವಾಸವಿಟ್ಟು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿರಬಹುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನನ್ನ ತವರು ಕ್ಷೇತ್ರವಾದ ಬೀಳಗಿಯಲ್ಲಿ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಸಭೆಯನ್ನು ಆಯೋಜಿಸಲಾಗಿತ್ತು. ಆ ವೇಳೆ ಮಾತನಾಡುವಾಗ ಈಶ್ವರಪ್ಪನವರು ನಾನು ಮುಂದಿನ ಸಿಎಂ ಎಂದು ಹೇಳಿದ್ದರು. ಇದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ESHWARAPPA 1

ಕಳೆದ ಹಲವು ವರ್ಷಗಳಿಂದ ನಾವು ಮಾಡಿಕೊಂಡು ಬಂದಿರುವ ಸಾರ್ವಜನಿಕ ಸೇವೆ, ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಅವರು ಅಭಿಮಾನದಿಂದ ಹೇಳಿರಬಹುದೆಂದು ಅಭಿಪ್ರಾಯಪಟ್ಟರು. ಕಳೆದ 5 ದಶಕಗಳಿಂದ ರಾಜ್ಯದಲ್ಲಿ ಮಾಜಿ ಸಿಎಂ ಹಾಗೂ ನಮ್ಮ ನಾಯಕರಾದ ಯಡಿಯೂರಪ್ಪ, ಕೇಂದ್ರ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಜೊತೆ ಈಶ್ವರಪ್ಪನವರು ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅವರೊಬ್ಬ ಹಿರಿಯ ನಾಯಕರು. ನನ್ನ ಮೇಲಿನ ಅಭಿಮಾನಕ್ಕೆ ನಾನು ಚಿರಋಣಿ ಎಂದು ನಿರಾಣಿ ಅವರು ಭಾವುಕರಾಗಿ ಹೇಳಿದರು.

ನನಗೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗಣಿ ಖಾತೆಯನ್ನು ನೀಡಿದ್ದರು. ಈಗ ಬಸವರಾಜ ಬೊಮ್ಮಾಯಿ ಅವರು ಕೈಗಾರಿಕೆ ಖಾತೆಯನ್ನು ನೀಡಿದ್ದಾರೆ. ಯಾವುದೇ ಖಾತೆ ನೀಡಿದರೂ ನಾನು ತೃಪ್ತಿಯಿಂದ ಕೆಲಸ ಮಾಡುತ್ತೇನೆ. ಈಗಲೂ ಅತ್ಯಂತ ಸಂತೋಷದಿಂದ ಇಲಾಖೆಯನ್ನು ನಿರ್ವಹಣೆ ಮಾಡುತ್ತಿದ್ದೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

bommai 9

ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವುದೇ ನಮ್ಮ ಮುಂದಿನ ಗುರಿ. ಬೊಮ್ಮಾಯಿ ನಾಯಕತ್ವಕ್ಕೆ ನಾವೆಲ್ಲರೂ ಸಾಥ್ ನೀಡಿ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 120 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಮುಂದಿನ ಸವಾಲು ಎಂದು ತಿಳಿಸಿದರು. ಇದನ್ನೂ ಓದಿ: ಭಾರತಕ್ಕೆ ಓಮಿಕ್ರಾನ್ ವಕ್ಕರಿಸುವ ಭೀತಿ – ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು

vote

2024ರ ಲೋಕಸಭೆ ಚುನಾವಣೆಯಲ್ಲಿ ಪುನಃ 25 ಸ್ಥಾನಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿದ್ದೇವೆ. ಮತ್ತೆ ಅದಕ್ಕಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲ್ಲು ಕಾರ್ಯತಂತ್ರವನ್ನು ರೂಪಿಸಿದ್ದೇವೆ. ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಕೋವಿಡ್‍ನಿಂದ ಹಿಡಿದು ರಾಜ್ಯದಲ್ಲಿ ಪ್ರವಾಹ ಉಂಟಾದ ವೇಳೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

MURUGESH NIRANI 1

ಒಂದು ಕಡೆ ಕೋವಿಡ್ ನಿರ್ವಹಣೆ ಮತ್ತೊಂದು ಕಡೆ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನತೆಯನ್ನು ರಕ್ಷಣೆ ಮಾಡಿ ಅವರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಜೊತೆಗೆ ಜೊತೆಗೆ ರಾಜ್ಯದ ಅಭಿವೃದ್ಧಿ ಕಡೆಯೂ ವಿಶೇಷ ನಿಗಾ ವಹಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಿಯೂ ಹಿನ್ನಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:Basavaraj BommaibengaluruMurugesh niraniಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
6 minutes ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
23 minutes ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
54 minutes ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
1 hour ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
1 hour ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?