ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಚಿತ್ರತಂಡ ಸಿನಿಮಾವನ್ನು 2022ರ ಫೆ.24ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.
ವಿಕ್ರಾಂತ್ ರೋಣ ಚಿತ್ರತಂಡ ಸಿನಿಮಾವನ್ನು 2022ರ ಫೆ.24ರಂದು ವಿಶ್ವಾದ್ಯಂತ ಸಿನಿಮಾ ತೆರೆಕಾಣಲಿದೆ ಎಂದು ಘೋಷಿಸಿದೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಕಿಚ್ಚ ಸುದೀಪ್ ಮತ್ತು ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ಅಭಿಮಾನಿಗಳು ಮೆಚ್ಚುಗೆಯನ್ನು ಸೂಚಿಸಿ ಸಿನಿಮಾಗಾಗಿ ಕಾಯುತ್ತಿರುವ ಕುರಿತಾಗಿ ಕಾಮೆಂಟ್ ಮಾಡುತ್ತಿದ್ದಾರೆ.
View this post on Instagram
ಕಿಚ್ಚ ಸುದೀಪ್ ಅವರು ಬೈಕ್ ಏರಿ ಖಡಕ್ ಪೋಸ್ ನೀಡಿದ್ದಾರೆ. ದಟ್ಟ ಕಾನನದ ಹಿನ್ನೆಲೆಯಲ್ಲಿ ಈ ಕಥೆ ಸಾಗಲಿದೆ ಎಂಬುದನ್ನು ಈ ಟೀಸರ್ ಸಾರಿ ಹೇಳುತ್ತಿದೆ. 2022ರ ಫೆ.24ರಂದು ಈ ಜಗತ್ತಿಗೆ ಹೊಸ ಹೀರೋ ಸಿಗಲಿದ್ದಾನೆ ಎಂಬ ಕ್ಯಾಪ್ಷನ್ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ತಾಯಿಯೊಂದಿಗೆ ಸೇರಿ ಅಕ್ಕನನ್ನು ಕೊಂದ ತಮ್ಮ- ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ವಿಕೃತಿ
ಅನೂಪ್ ಭಂಡಾರಿ ನಿರ್ದೇಶನ ಮಾಡಿರುವ ಈ ಸಿನಿಮಾ ಪೋಸ್ಟರ್, ಮೆಕಿಂಗ್, ಟೀಸರ್ ನೋಡಿದ ಅಭಿಮಾನಿಗಳು ಭಾರೀ ನೀರಿಕ್ಷೆ ಇಟ್ಟುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಸದ್ಯ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, ಅಭಿಮಾನಿಗಳ ಕಾತುರತೆಯನ್ನು ಇನ್ನಷ್ಟು ಹೆಚ್ಚು ಮಾಡಿದೆ.