ಪ್ರಾಂಶುಪಾಲ, ಶಿಕ್ಷಕರು ಸೇರಿ 9 ಮಂದಿಯಿಂದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ರೇಪ್

Public TV
2 Min Read
RAPE

ಜೈಪುರ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಹಾಗೂ ಒಂಬತ್ತು ಶಿಕ್ಷಕರು ಕಿರುಕುಳ ನೀಡಿ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಂದೆ ಶಾಲೆಗೆ ಹೊಗದ ಕಾರಣವನ್ನು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ 10ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಆಕೆಯ ಮೇಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗುತ್ತಿದ್ದಾರೆ. ಜೊತೆಗೆ ಇಬ್ಬರು ಮಹಿಳಾ ಶಿಕ್ಷಕರು ಘಟನೆಯ ವೀಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

RAPE

ಈ ಬಗ್ಗೆ ಪೊಲೀಸರಿಗೆ ಸಂತ್ರಸ್ತೆಯ ತಂದೆ ದೂರು ನೀಡಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಿದ ಸಂದರ್ಭದಲ್ಲಿ ಇನ್ನೂ ಮೂವರು ವಿದ್ಯಾರ್ಥಿನಿಗಳು ಅತ್ಯಾಚಾರಕ್ಕೆ ಒಳಗಾಗಿರುವುದು ತಿಳಿದುಬಂದಿದೆ. ಇವರು 6ನೇ ತರಗತಿ, 4ನೇ ತರಗತಿ ಮತ್ತು 3ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗಳಾಗಿದ್ದಾರೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಸಂತ್ರಸ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಖ್ಯಾತ ಫೋಟೋಗ್ರಾಫರ್ ತೆಗೆದಿರುವ ಸೂರ್ಯನ ಒಂದು ಫೋಟೋಗೆ 3766ರೂ.!

ಮಹಿಳಾ ಶಿಕ್ಷಕರಿಗೆ ಈ ವಿಷಯವನ್ನು ತಿಳಿಸಿದಾಗ ಅವರು ಶಾಲಾ ಶುಲ್ಕ ಹಾಗೂ ಪುಸ್ತಕಗಳ ಹಣವನ್ನು ಪಾವತಿಸುವುದಾಗಿ ಆಮಿಷ ನೀಡಿದ್ದರು. ಜೊತೆಗೆ ದೂರು ನೀಡದಂತೆಯೂ ತಿಳಿಸಿದ್ದರು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

RAPE CASE

ಮೂವರು ಶಿಕ್ಷಕರು ಹಾಗೂ ಪ್ರಿನ್ಸಿಪಾಲ್‌ರು ಹಲವಾರು ಬಾರಿ ಸಂತ್ರಸ್ತರನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅವರು ಮದ್ಯ ಸೇವಿಸಿ ಅತ್ಯಾಚಾರವನ್ನು ಎಸಗಿದ್ದಾರೆ ಎಂದು ವಿಚಾರಣೆ ವೇಳೆ ಸಂತ್ರಸ್ತೆ ತಿಳಿಸಿದ್ದಾರೆ. ಈ ಬಗ್ಗೆ ದೂರು ನೀಡಲು ಹೋದಾಗ ಪ್ರಾಂಶುಪಾಲರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ. ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ ಪ್ರಾಂಶುಪಾಲರು, ಅಂತಹ ಯಾವುದೇ ಪ್ರಕರಣದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

rape web

ಅಲ್ವಾರ್‌ನ ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿನಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಲೆಯ ಪ್ರಾಂಶುಪಾಲರು ಮತ್ತು ಒಂಬತ್ತು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಮ್ಮ ದೂರಿನಲ್ಲಿ, ಸಂತ್ರಸ್ತರು ಶಿಕ್ಷಕರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ. ಮಂಧಾನ ಪೊಲೀಸ್ ಠಾಣಾಧಿಕಾರಿ ಮುಖೇಶ್ ಯಾದವ್ ಮಾತನಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಮೂರು ವಿಭಿನ್ನ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಪೊಲೀಸರು ಪ್ರಕರಣದ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೀಡಿಯೋ: ಆರತಿ ಬೆಳಗಿ ಮುದ್ದಿನ ಶ್ವಾನದ ಹುಟ್ಟುಹಬ್ಬ ಆಚರಿಸಿದ ಸುಧಾಮೂರ್ತಿ!

Share This Article
Leave a Comment

Leave a Reply

Your email address will not be published. Required fields are marked *