ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ಏನಾಯ್ತು? ಎಂಬ ಬಗ್ಗೆ ನಿಖರ ಕಾರಣ ಗೊತ್ತಿಲ್ಲ. ಆದರೆ ಪ್ರವಾಸಿಗರು ಮೊಬೈಲ್‍ನಲ್ಲಿ ಸೆರೆ ಹಿಡಿದಿರುವ ಹೆಲಿಕಾಪ್ಟರ್‌ನ ಕೊನೆಯ ದೃಶ್ಯಗಳ ಪ್ರಕಾರ, ಅಲ್ಲಿ ದಿಢೀರ್ ಎಂದು ದಟ್ಟ ಮಂಜು ಆವರಿಸೋದು ಕಂಡು ಬರುತ್ತದೆ. ಈ ವೀಡಿಯೋ ಅಸಲಿಯತ್ತಿನ ಬಗ್ಗೆಯೇ ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದೀಗ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಕೆಳಮಟ್ಟದಲ್ಲಿ ಹಾರುತ್ತಿದ್ದ ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ಕಾಣದಂತಾಗುತ್ತದೆ ಅದೇ ಕ್ಷಣಗಳಲ್ಲಿ ದೊಡ್ಡ ಸದ್ದು ಕೇಳಿಬರುತ್ತದೆ. ಬ್ಲಾಸ್ಟ್ ಆಯ್ತಾ ಎಂದು ಪ್ರವಾಸಿಗರು ಮಾತನಾಡಿಕೊಳ್ಳುವುದು ಆ 16 ಸೆಕೆಂಡ್‍ಗಳ ವೀಡಿಯೋದಲ್ಲಿ ಸೆರೆ ಆಗಿದೆ. ಆದರೆ ಈ ವಿಡಿಯೋ ಅಸಲಿಯತ್ತಿನ ಬಗ್ಗೆಯೇ ಬಿಜೆಪಿ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುತಾತ್ಮ ಯೋಧರಿಗೆ ದೆಹಲಿಯಲ್ಲಿ ಗೌರವ ನಮನ
ಈ ನಡುವೆ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರೇ 11 ಸೇನಾಧಿಕಾರಿಗಳ ಪಾರ್ಥಿವ ಶರೀರಗಳನ್ನು ಇಂದು ದೆಹಲಿಯ ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದ್ದು, ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?
ಶುಕ್ರವಾರ ಏನೇನು?
ಬೆಳಗ್ಗೆ 11ಕ್ಕೆ ಕಾಮರಾಜ್ ಮಾರ್ಗ್ ನಿವಾಸದಲ್ಲಿ ರಾವತ್ ದಂಪತಿ ಭೌತಿಕ ಕಾರ್ಯಗಳು ನಡೆಯಲಿದೆ. ಮೂರು ಸೇನಾ ಪಡೆಗಳ ಬ್ಯಾಂಡ್ ಜೊತೆಗೆ ಮೆರವಣಿಗೆ ನಡೆಯುತ್ತದೆ. ರಾವತ್‍ಗೆ ನಮನ ಸಲ್ಲಿಸಲು ಬಂಧು ಬಾಂಧವರಿಗೆ ಮಧ್ಯಾಹ್ನ 2ರವರೆಗೂ ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಕಾಮರಾಜ್ ಮಾರ್ಗ್‍ನಿಂದ ಬ್ರಾರ್ ವೃತ್ತದ ಸ್ಮಶಾನದವರೆಗೂ ರಾವತ್ ದಂಪತಿಯ ಮೆರವಣಿಗೆ ನಡೆಯಲಿದೆ. ಸಂಜೆ 4 ಗಂಟೆ – ಧೌಲಾಖಾನ್‍ನ ಬ್ರಾರ್ ಕ್ರಿಮೆಟೋರಿಯಂನಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ದಂಪತಿ ಅಂತ್ಯಕ್ರಿಯೆ ಮಾಡಲಾಗುತ್ತದೆ. ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್
ಉಳಿದ ಹುತಾತ್ಮರ ಪಾರ್ಥಿವ ಶರೀರಗಳನ್ನು ಅವರವರ ಸ್ವಗ್ರಾಮಗಳಿಗೆ ಕಳುಹಿಸಲಾಗುತ್ತದೆ. ನಾಳೆ ಅಥವಾ ನಾಡಿದ್ದು ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆಗಳು ನಡೆಯಲಿದೆ.