ಮೆಕ್ಸಿಕೋ: ವಲಸಿಗರನ್ನು ಹೊತ್ತು ಸಾಗುತ್ತಿದ್ದ ಟ್ರಕ್ ಪಲ್ಟಿಯಾಗಿ 49 ಮಂದಿ ಸಾವನ್ನಪ್ಪಿದ್ದು, 58 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಮೆಕ್ಸಿಕೋದಲ್ಲಿ ನಡೆದಿದೆ.
ಈ ಕುರಿತಂತೆ ರಾಜ್ಯ ನಾಗರಿಕ ರಕ್ಷಣಾ ಕಚೇರಿಯ ಮುಖ್ಯಸ್ಥ ಲೂಯಿಸ್ ಮ್ಯಾನುಯೆಲ್ ಮೊರೆನೊ ಅವರು, ಘಟನೆಯಲ್ಲಿ 49 ಮಂದಿ ಸಾವನ್ನಪ್ಪಿದ್ದು, 58 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿಯೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾವತ್, ಸೇನಾಧಿಕಾರಿಗಳ ಮರಣ ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ
ಮಧ್ಯ ಅಮೆರಿಕದಿಂದ ಬಂದ ವಲಸಿಗರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಟ್ರೈಲರ್ ಗುರುವಾರ ಚಿಯಾಪಾಸ್ ರಾಜ್ಯದ ರಾಜಧಾನಿ ಟಕ್ಸ್‌ಟ್ಲಾ ಗುಟೈರೆಜ್ ಕಡೆಗೆ ತೆರಳುವಾಗ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಮೃತರನ್ನು ತಮ್ಮ ರಾಷ್ಟ್ರದವರೆಂದು ಅಲ್ಲಿನ ಸರ್ಕಾರ ದೃಢಪಡಿಸಿಲ್ಲ. ಇನ್ನೂ ಅಪಘಾತದಲ್ಲಿ ಬದುಕುಳಿದಿರುವ ಕೆಲವರನ್ನು ನೆರೆಯ ದೇಶವಾದ ಗ್ವಾಟೆಮಾಲಾದಿಂದ ಬಂದವರು ಎಂದು ಮೊರೆನೊ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಯುವ ಮುಖಂಡನನ್ನು ಚಾಕುವಿನಿಂದ ಇರಿದು ಕೊಂದ್ರು!
ಟ್ರಕ್‍ನಲ್ಲಿ ಬಹಳಷ್ಟು ಜನ ಇದ್ದಿದ್ದರಿಂದ ಹೆಚ್ಚಿನ ಭಾರವೇ ಅಪಘಾತಕ್ಕೆ ಕಾರಣವಾಗಿರಬಹುದು. ಇನ್ನೂ ಘಟನೆ ವೇಳೆ 107 ಮಂದಿ ಟ್ರಕ್‍ನಲ್ಲಿದ್ದರು. ದಕ್ಷಿಣ ಮೆಕ್ಸಿಕೋದಲ್ಲಿ ಸರಕು ಸಾಗಣೆ ಟ್ರಕ್‍ಗಳಲ್ಲಿ ವಲಸಿಗರ ಕಳ್ಳಸಾಗಣೆ ಸಾಮಾನ್ಯವಾಗಿದ್ದು, ಇದೇ ರೀತಿ ನಡೆದಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ ವೇಳೆ ಸಾಕಷ್ಟು ಮಂದಿ ವಲಸಿಗರಿದ್ದರು. ಮತ್ತೆ ಕೆಲ ವಲಸಿಗರು ಬಂಧನ ಭೀತಿಯಿಂದ ಅಪಘಾತ ಸ್ಥಳದಿಂದ ಪರಾರಿಯಾಗಿದ್ದಾರೆ.