Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ಬಿಪಿನ್ ರಾವತ್ ದಂಪತಿ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ಬಿಪಿನ್ ರಾವತ್ ದಂಪತಿ ಅಂತ್ಯಕ್ರಿಯೆ

Latest

ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ಬಿಪಿನ್ ರಾವತ್ ದಂಪತಿ ಅಂತ್ಯಕ್ರಿಯೆ

Public TV
Last updated: December 10, 2021 6:01 pm
Public TV
Share
2 Min Read
BIPIN RAWATH 6
SHARE

ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಕಲ ಅತ್ಯುನ್ನತ ಸೇನಾ ಗೌರವಗಳೊಂದಿಗೆ ದೆಹಲಿಯ ಕಂಟೋನ್ಮೆಂಟ್ ಸ್ಕ್ವೇರ್ ಚಿತಾಗಾರದಲ್ಲಿ ನಡೆಯಿತು.

BIPIN RAWATH 4

ನಿನ್ನೆ ರಾವತ್ ದಂಪತಿ ಸೇರಿ 13 ಮಂದಿಯ ಪಾರ್ಥಿವ ಶರೀರವನ್ನು ದೆಹಲಿಯ ಪಾಲಂ ವಾಯುನೆಲೆಗೆ ತರಲಾಯಿತು. ಪ್ರಧಾನಿ ಸೇರಿ ಗಣ್ಯರು ಸೇನಾ ಮುಖ್ಯಸ್ಥರು ಅಂತಿಮ ನಮನ ಸಲ್ಲಿಸಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕಾಮರಾಜ್ ಮಾರ್ಗ್ ನಿವಾಸದಲ್ಲಿ ರಾವತ್ ದಂಪತಿ ಭೌತಿಕ ಕಾರ್ಯಗಳು ನಡೆಯಿತು. ಮೂರು ಸೇನಾ ಪಡೆಗಳ ಬ್ಯಾಂಡ್ ಜೊತೆಗೆ ಮೆರವಣಿಗೆ ಮೂಲಕ ಮನೆಗೆ ಪಾರ್ಥಿವ ಶರೀರವನ್ನು ತರಲಾಯಿತು. ರಾವತ್ ದಂಪತಿಗೆ ನಮನ ಸಲ್ಲಿಸಲು ಬಂಧು-ಬಾಂಧವರಿಗೆ ಮಧ್ಯಾಹ್ನ 2ಗಂಟೆವರೆಗೂ ಅವಕಾಶ ನೀಡಲಾಗಿತ್ತು. ಮಧ್ಯಾಹ್ನ 2 ಗಂಟೆಗೆ ಕಾಮರಾಜ್ ಮಾರ್ಗದಿಂದ ಬ್ರಾರ್ ವೃತ್ತದ ಸ್ಮಶಾನದವರೆಗೂ ರಾವತ್ ದಂಪತಿಯ ಮೆರವಣಿಗೆ ನಡೆಯಿತು. ಇದನ್ನೂ ಓದಿ: ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ

BIPINRAWATH

ರಾವತ್ ನಿವಾಸದಿಂದ ಪಾರ್ಥಿವ ಶರೀರದ ಮೆರವಣಿಗೆಯನ್ನು ರಾಜಾಜಿ ಮಾರ್ಗ, ತೀನ್ ಮೂರ್ತಿ ಮಾರ್ಗ, 11 ಮೂರ್ತಿ, ಸರ್ದಾರ್ ಪಟೇಲ್ ಮಾರ್ಗ, ದೌಲಾ ಖಾನ್ ಮೂಲಕ ದೆಹಲಿ ಕಟೋನ್ಮೆಂಟ್‍ನ ಬ್ರಾರ್ ಸ್ಕ್ವೇರ್ ಚಿತಾಗಾರದವರೆಗೆ ತರಲಾಯಿತು. ಚಿತಾಗಾರಕ್ಕೆ ಬರುತ್ತಿದ್ದಂತೆ ಪಾರ್ಥಿವ ಶರೀರವನ್ನು 6 ಸೇನಾಧಿಕಾರಿಗಳು ಹೊತ್ತು ಸಾಗಿದರು. 800 ಸೇನಾಧಿಕಾರಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು, 17 ಸುತ್ತು ಕುಶಾಲತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಲಾಯಿತು. ತಲಾ 99 ಮಂದಿ ಇರುವ ಭೂಸೇನೆ, ನೌಕಾ ಸೇನೆ, ವಾಯುಸೇನೆಯ ಬ್ಯಾಂಡ್‍ನಿಂದ ಗೌರವ ನಮನ ಸಲ್ಲಿಸಲಾಯಿತು.

BIPN RAWATH

ರಾವತ್ ನಿವಾಸದಿಂದ 9 ಕಿ.ಮೀ ವರೆಗಿನ ಅಂತಿಮಯಾತ್ರೆ ಆರಂಭವಾಗುತ್ತಿದ್ದಂತೆ ರಸ್ತೆಗಳ ಇಕ್ಕೆಲಗಳಲ್ಲಿ ಜನಸ್ತೋಮ ಕೂಡಿತ್ತು. ಎಲ್ಲರೂ ಜಯಘೋಷ ಕೂಗುತ್ತಾ ದಂಡನಾಯನಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. 99 ಮಿಲಿಟರಿ ಧ್ವಜಧಾರಿಗಳು ಧ್ವಜ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಸಂಜೆ 4:30 ಗಂಟೆಗೆ ಧೌಲಾಖಾನ್‍ನ ಬ್ರಾರ್ ಕ್ರಿಮೆಟೋರಿಯಂನಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ದಂಪತಿ ಅಂತ್ಯಕ್ರಿಯೆ ನಡೆಯಿತು. ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಅಂತಿಮ ವಿಧಿವಿಧಾನ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು. ಇದನ್ನೂ ಓದಿ: ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?

BIPIN RAWATH 2 1

ಅಂತ್ಯಕ್ರಿಯೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್‍ನ ಸೇನಾಧಿಕಾರಿಗಳು, ಕೇಂದ್ರ ಸಚಿವರು, ಸೇನಾಧಿಕಾರಿಗಳು ಮತ್ತು ಗಣ್ಯರು ಭಾಗವಹಿಸಿದ್ದರು. ಉಳಿದ ಹುತಾತ್ಮರ ಪಾರ್ಥಿವ ಶರೀರಗಳನ್ನು ಅವರವರ ಸ್ವಗ್ರಾಮಗಳಿಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಕೊಡಗಿಗೆ ಅಮೋಘ ಕೊಡುಗೆ ನೀಡಿದ್ದ ಬಿಪಿನ್ ರಾವತ್

BIPIN RAWATH 5

ತಮಿಳುನಾಡಿನ ಕೂನೂರು ಬಳಿಯ ಅರಣ್ಯ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕ ಬಿಪಿನ್ ರಾವತ್,  ಪತ್ನಿ ಸೇರಿ 13 ಮಂದಿ ಹುತಾತ್ಮರಾಗಿದ್ದರು. ಕ್ಯಾಪ್ಟನ್ ವರುಣ್ ಸಿಂಗ್ ಒಬ್ಬರು ತೀವ್ರ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:Bipin Rawatindian armyಬಿಪಿನ್ ರಾವತ್ಭಾರತೀಯ ಸೇನೆಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Mojtaba Khamenei
Latest

ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಆಯ್ಕೆ

Public TV
By Public TV
42 minutes ago
daily horoscope dina bhavishya
Astrology

ದಿನ ಭವಿಷ್ಯ: 04-03-2026

Public TV
By Public TV
1 hour ago
abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
7 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
8 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
9 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?