ಚಾಮರಾಜನಗರ: ಪತ್ನಿಯನ್ನು ಕೊಂದು ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉತ್ತುವಳ್ಳಿ ಗ್ರಾಮದ ಮಂಜು (42) ಆತ್ಮಹತ್ಯೆ ಮಾಡಿಕೊಂಡ ಕೈದಿ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಂಜು ಚಾಮರಾಜನಗರದ ಉಪಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಪತ್ನಿಯನ್ನು ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ – ಎರಡು ಲಕ್ಷ ದಂಡ
ಮಂಜು ಮಹಡಿ ಮೇಲಿನಿಂದ ಬಿದ್ದಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಪ್ರಕರಣ?
ಮದ್ಯ ವ್ಯಸನಿಯಾಗಿದ್ದ ಮಂಜು ಪ್ರತಿದಿನ ಕುಡಿದು ಬಂದು ಪತ್ನಿ ಚಿನ್ನತಾಯಮ್ಮಳೊಂದಿಗೆ ಗಲಾಟೆ ಮಾಡುತ್ತಿದ್ದ. ಕುಡಿತದ ಬಗ್ಗೆ ಪ್ರಶ್ನಿಸಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಈ ಘಟನೆಯು 2017 ರ ಅಕ್ಟೋಬರ್ 26 ರಂದು ರಾತ್ರಿ ನಡೆದಿದ್ದು, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಪತಿಗೆ ಡೈವೋರ್ಸ್ ಕೊಡು, ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸ್ತೀನಿ – ನೂರ್ ಜಹಾನ್ ಅರೆಸ್ಟ್
ಪತ್ನಿ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ಚಾಮರಾಜನಗರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಿತ್ತು. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಬಳಿಕ ಕೈದಿ ಮಂಜು ಜಿಗುಪ್ಸೆಗೊಂಡು ಮೇಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.