ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಕುಂದಾ ನಗರಿ ಬೆಳಗಾವಿ ಸಜ್ಜಾಗಿದೆ. ನಾಳೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸಿದ್ಧತೆಗಳನ್ನು ಪರಿಶೀಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ನಾಳೆ ಬೆಳಗ್ಗೆ 10.30ಕ್ಕೆ ಕಾರ್ಯಕಲಾಪಗಳ ಸಮಿತಿಯ ಸಭೆ ನಡೆಯಲಿದೆ. ಎಲ್ಲಾ ಪಕ್ಷದ ಸದಸ್ಯರು ಭಾಗವಹಿಸಲಿದ್ದಾರೆ. ಸಭೆಯ ಎಲ್ಲಾ ದಿನದ ಕಾರ್ಯ ಕಲಾಪದ ವಿವರಗಳನ್ನ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಚರ್ಚೆ ಮಾಡಿ ಕಾರ್ಯಕಲಾಪದ ವಿವರ ಪಡೆಯುತ್ತೇವೆ ಎಂದರು.
ಮಸೂದೆಗಳಿನ್ನೂ ಬಂದಿಲ್ಲ: ಸರ್ಕಾರ ಇದುವರೆಗೂ ಸದನದಲ್ಲಿ ಯಾವ ಯಾವ ಬಿಲ್ ಮಂಡಿಸಲಿದೆ ಎನ್ನುವುದನ್ನು ಕಳುಹಿಸಿಲ್ಲ. ಬಿಲ್ ಕಳಿಸ್ತೀವಿ ಎಂದು ಹೇಳಿದ್ದಾರೆ, ಆದರೆ ಇದುವರೆಗೂ ಬಂದಿಲ್ಲ. ನಾಳೆಯೊಳಗೆ ಕಳುಹಿಸುತ್ತೇವೆ ಎಂದು ಮೌಖಿಕವಾಗಿ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ
2 ದಿನವಾದ್ರೂ ಉತ್ತರ ಕರ್ನಾಟಕದ ಚರ್ಚೆ ಬೇಕು: ಈ ಅಧಿವೇಶನದಲ್ಲಿ ಎರಡು ದಿನವಾದರೂ ಉತ್ತರ ಕರ್ನಾಟಕ ಭಾಗದ ವಿಷಯ ಚರ್ಚೆ ಮಾಡಬೇಕು ಎಂದು ಸಲಹೆಗಳು ಬಂದಿವೆ. ಬಿಎಸಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ APMC ಕಾಯ್ದೆ ವಾಪಸ್ ಇಲ್ಲ: ಸೋಮಶೇಖರ್
ಕೋವಿಡ್ ಮುಂಜಾಗ್ರತೆ: ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಕಲಾಪ ಚೆನ್ನಾಗಿ ನಡೆಯುವ ಅಗತ್ಯತೆ ಇದೆ. ಇಷ್ಟೆಲ್ಲ ವ್ಯವಸ್ಥೆ ಮಾಡಿ ಕಲಾಪ ಚೆನ್ನಾಗಿ ನಡೆಯಲಿಲ್ಲ ಅಂದ್ರೆ ಹೇಗೆ ಎಂದ ಅವರು, ಎಲ್ಲಾ ಶಾಸಕರಿಗೂ ಸಕ್ರಿಯವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ. ನಿಯಮಾನುಸಾರ ಎಲ್ಲರಿಗೂ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದರು.
ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತದೆ ಎಂದು ಸದಸ್ಯರು ಗೈರು ಹಾಜರಾಗುವುದು ಸರಿಯಲ್ಲ ಎಂದು ಕಾಗೇರಿ ಅವರು ಇದೇ ವೇಳೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ