ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ, ವೋಟರ್‌ ಐಡಿ, ಆಧಾರ್‌ ನೀಡಿ: ಸುಪ್ರೀಂ ಕೋರ್ಟ್‌

Public TV
1 Min Read
SUPREME COURT

ನವದೆಹಲಿ: ಮೂಲಭೂತ ಹಕ್ಕುಗಳನ್ನು ಪಡೆಯಲು ದೇಶದ ಪ್ರತಿಯೊಬ್ಬ ನಾಗರಿಕರು ಅರ್ಹರು. ಹೀಗಾಗಿ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ, ವೋಟರ್‌ ಐಡಿ, ಆಧಾರ್‌ ಕಾರ್ಡ್‌ ನೀಡುವ ಪ್ರಕ್ರಿಯೆಯನ್ನು ಆರಂಭಿಸುವಂತೆ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಪೀಠವು, ಯಾವುದೇ ಪುರಾವೆ ಇಲ್ಲದಿದ್ದರೂ ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ನೀಡುವಂತೆ ಕೇಂದ್ರ ಹಾಗೂ ಇತರೆ ಸರ್ಕಾರಗಳಿಗೆ ಸೂಚನೆ ನೀಡಿತ್ತು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಬಂದ್ರೆ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1,000 ರೂ. ಠೇವಣಿ: ಕೇಜ್ರಿವಾಲ್‌

AADHAR E KYC

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್‌, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ 2011ರಲ್ಲೇ ಸುಪ್ರೀಂ ಕೋರ್ಟ್‌ ಹಲವು ನಿರ್ದೇಶನಗಳನ್ನು ನೀಡಿತ್ತು.

ದಶಕದ ಹಿಂದೆಯೇ ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ಹಾಗೂ ಗುರುತಿನ ಚೀಟಿಯನ್ನು ನೀಡುವಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ. ಆದರೂ ಅದು ಯಾಕೆ ಅನುಷ್ಠಾನಕ್ಕೆ ಬಂದಿಲ್ಲ ಎಂದು ಪೀಠವು ಪ್ರಶ್ನಿಸಿದೆ. ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!

court

ರಾಷ್ಟ್ರೀಯ ಏಡ್ಸ್‌ ನಿಯಂತ್ರಣ ಸಂಘಟನೆಗಳು ಹಾಗೂ ರಾಜ್ಯ ಏಡ್ಸ್‌ ನಿಯಂತ್ರಣ ಸಂಘಟನೆಗಳ ಸಹಕಾರವನ್ನು ಸರ್ಕಾರಿ ಪ್ರಾಧಿಕಾರಿಗಳು ಪಡೆದುಕೊಳ್ಳಬೇಕು. ಸಮುದಾಯ ಕೇಂದ್ರಿತ ಸಂಘಟನೆಗಳ ನೆರವಿನೊಂದಿಗೆ ಲೈಂಗಿಕ ಕಾರ್ಯಕರ್ತೆಯರ ಪಟ್ಟಿಯನ್ನು ಮಾಡಿಕೊಳ್ಳಿ. ಅದನ್ನು ಪರಿಶೀಲಿಸಿ ಅಗತ್ಯ ಹಕ್ಕು, ಸೌಲಭ್ಯಗಳನ್ನು ಒದಗಿಸುವ ಪ್ರಕ್ರಿಯೆಯನ್ನು ಶೀಘ್ರವೇ ಆರಂಭಿಸಿ ಎಂದು ಕೋರ್ಟ್‌ ಸಲಹೆ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *